ಕಾಲ್ತುಳಿತದ ಎಫೆಕ್ಟ್;‌ ಬೆಂಗಳೂರಿನಿಂದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ಸರಣಿ, ಮಹಿಳಾ ಏಕದಿನ ವಿಶ್ವಕಪ್ ಸ್ಥಳಾಂತರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್. 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ಇದೇ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಸರಣಿ ಪಂದ್ಯಗಳನ್ನು ರಾಜ್‌ಕೋಟ್‌  ಗೆ ಸ್ಥಳಾಂತರಿಸಿದೆ. ನವೆಂಬರ್ 13 ರಿಂದ 19 ರವರೆಗೆ ಇಲ್ಲಿ ನಡೆಯಲಿರುವ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಬೆಂಗಳೂರಿನಲ್ಲಿ ನಡೆಯಬೇಕಿತ್ತು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಆಡಳಿತ ಮತ್ತು ಆಡಳಿತ ಮಂಡಳಿಯ ಡೋಲಾಯಮಾನ ಪರಿಸ್ಥಿತಿ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಬಿಸಿಸಿಐ ಯಾವುದೇ ನಿರ್ದಿಷ್ಟ ಕಾರಣ ನೀಡದೇ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪಂದ್ಯಗಳನ್ನು ರಾಜ್‌ಕೋಟ್‌ ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ನಿರ್ದಿಷ್ಟ ಕಾರಣಗಳನ್ನು ತಿಳಿಸದೆ ಇದ್ದರೂ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಹಾಗೆಯೇ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಗಳು ಕೂಡ ಸಹ ಬೇರೆಡೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 30 ರಿಂದ ಆರಂಭವಾಗಲಿರುವ ವುಮೆನ್ಸ್ ಒಡಿಐ ವರ್ಲ್ಡ್​ ಕಪ್​ ನ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈ ಪಂದ್ಯವನ್ನೂ  ಬೇರೆ ಕ್ರೀಡಾಂಗಣಕ್ಕೆ ಬದಲಾಯಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2026ರ ಟಿ20 ವಿಶ್ವಕಪ್​ ಟಿ-20 ವಿಶ್ವಕಪ್ ಪಂದ್ಯಾವಳಿಗಳು ಭಾರತದಲ್ಲಿ ನಡೆಯಲಿದ್ದು, ಆಯೋಜನೆಗೊಳ್ಳಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಪಂದ್ಯಗಳನ್ನು ನಡೆಸಲು ಉದ್ದೇಶಿಸಲಾಗಿತ್ತು. ಇದೀಗ ಟಿ20 ವಿಶ್ವಕಪ್ ಪಂದ್ಯದ ಆತಿಥ್ಯದ ಹಕ್ಕು ಕರ್ನಾಟಕ ಕ್ರಿಕೆಟ್ ಮಂಡಳಿಯ ಕೈ ತಪ್ಪಲಿದೆ ಎಂದು ಬಿಸಿಸಿಐ ಮೂಲಗಳು ಹೇಳುತ್ತಿವೆ.

More articles

Latest article

Most read