ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಗೆ ಭದ್ರತೆ ಕೋರಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಮಂತ್ರಿ ಅಮಿತ್ ಶಾ ಗೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಮಂಗಳವಾರ ಗುಹವಾಟಿ ನಗರ ಪ್ರವೇಶಿಸುತ್ತಿದಂತೆ ಅಸ್ಸಾಂ ಸರ್ಕಾರ ಪೊಲೀಸರನ್ನು ಬಿಟ್ಟು ತಡೆಹಿಡಿದಿತ್ತು. ಇದರ ವಿರುದ್ಧ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೆಡ್ಗಳನ್ನು ಮುರಿದರು. ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಚಕಮಕಿತಲ್ಲಿ ಕೆಲವು ನಾಯಕರಿಗೆ ಗಾಯಗಳಾಯಿತು.
ಈ ಘಟನೆ ಬಗ್ಗೆ ಸಂಪೂರ್ಣವಾಗಿ ಪತ್ರ ಬರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯಾತ್ರೆ ಮುಗಿಯುವವರೆಗೂ ರಾಹುಲ್ ಗಾಂಧಿ ಅವರಿಗೆ ಭದ್ರತೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಯಾತ್ರೆಯ ವೇಳೆ ಎದುರಿಸಿರುವ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಅಸ್ಸಾಂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕೆಲವೊಮ್ಮೆ ಕಾರ್ಯಕರ್ತರ ಬೆಂಗಾವಲು ವಾಹನವನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಹೀಗಾಗಿ ರಾಹುಲ್ ಗಾಂಧಿ ಭದ್ರತೆಗೆ ಅಪಾಯವಿದೆ ಎಂದಿದ್ದಾರೆ. ಅಮಿತ್ ಶಾ ಮಧ್ಯಪ್ರವೇಶಿಸಿ ರಾಹುಲ್ ಗಾಂಧಿ ಹಾಗೂ ಯಾತ್ರೆಯಲ್ಲಿ ಭಾಗವಹಿಸುವವರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಪತ್ರದಲ್ಲಿ ಒತ್ತಾಯಿಸಲಾಗಿದೆ. ದೈಹಿಕ ಹಾನಿಗೆ ಕಾರಣವಾಗುವ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.