Thursday, May 23, 2024

ಪಿವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್,ಎಂಎಸ್ ಸ್ವಾಮಿನಾಥನ್‌ಗೆ ಭಾರತ ರತ್ನ ಘೋಷಣೆ

Most read

ಚುನಾವಣೆ ಸಂದರ್ಭದಲ್ಲಿ ‘ಭಾರತ ರತ್ನ’ಕ್ಕೆ ಗಣ್ಯರ ಆಯ್ಕೆ ಮಹತ್ವ ಪಡೆದಿದೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಹಾಗೂ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ‘ಭಾರತ ರತ್ನ’ ಪುರಸ್ಕಾರ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ, ಮತ್ತೆ ಮೂವರನ್ನು ದೇಶದ ಸರ್ವೋನ್ನತ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.

ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಹಾಗೂ ಹಸಿರು ಕ್ರಾಂತಿ ಪಿತಾಮಹ ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್‌ಗೆ ಭಾರತ ರತ್ನ ಘೋಷಣೆ ಮಾಡಿದೆ.

ಚುನಾವಣೆ ಸಂದರ್ಭದಲ್ಲಿ ‘ಭಾರತ ರತ್ನ’ಕ್ಕೆ ಗಣ್ಯರ ಆಯ್ಕೆ ಮಹತ್ವ ಪಡೆದಿದೆ. ಕಾಂಗ್ರೆಸ್ ನಾಯಕರಾಗಿದ್ದ ಪಿವಿ ನರಸಿಂಹ ರಾವ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಅನೇಕ ಬಾರಿ ಶ್ಲಾಘಿಸಿದ್ದನ್ನು ಮತ್ತು ಕಾಂಗ್ರೆಸ್ ಅವರನ್ನು ಮೂಲೆಗುಂಪು ಮಾಡಿತ್ತು ಎಂದು ಆರೋಪಿಸಿದ್ದನ್ನು ಕಾಣಬಹುದು.

More articles

Latest article