ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ : ಕಾಯ್ದಿರಿಸಿದ ಆದೇಶ

ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ಆದೇಶವನ್ನು ಕಾಯ್ದಿರಿಸಿದೆ. ಈ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಪೀಠದ ನ್ಯಾಯಮೂರ್ತಿ ಪ್ರದೀಪ್
ಸಿಂಗ್‌ ಯೆರೂರು ಸೋಮವಾರ ವಿಚಾರಣೆ ನಡೆಸಿದರು.

ಮೈಸೂರು ಮತ್ತು ಹಾಸನ ಜಿಲ್ಲೆಗಳ ಪ್ರವೇಶ ನಿರ್ಬಂಧಿಸಿರುವ ನಿರೀಕ್ಷಣಾ ಜಾಮೀನಿನಲ್ಲಿನ ಷರತ್ತುಗಳನ್ನು ಸಡಿಲಿಸಬೇಕು ಎಂದು ಅರ್ಜಿದಾರರು ಕೋರಿಕೊಂಡಿದ್ದರು.

More articles

Latest article

Most read