ಕೆ ಆರ್ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರ 11 ಗಂಟೆಗೆ ನಡೆಯಲಿದೆ. ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಲಿದ್ದಾರೆ.
ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆ ಅಪಹರಣ ಕೇಸ್ ನಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಕೋರ್ಟ್ ಮುಂದೂಡಿತ್ತು ಈ ವೇಳೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಗುರುವಾರ ಅಥವಾ ಶುಕ್ರವಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದರು.
ಈ ವೇಳೆ ಭವಾನಿ ರೇವಣ್ಣ ಪರ ವಕೀಲರು ಎಫ್ಐಆರ್ ನಲ್ಲಿ ಆರೋಪಿ ಮಾಡದೆ ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದರು. ನ್ಯಾಯಾಲಯ ಆಕ್ಷೇಪಣೆ ಸಲ್ಲಿಸಲಿ ಎಂದು ವಿಚಾರಣೆಯನ್ನು ಮೇ 29 ಕ್ಕೆ ಮುಂದೂಡಲಾಗಿತ್ತು. ಹೀಗಾಗಿ ಬುಧವಾರ 11 ಗಂಟೆಗೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಈ ಸಂದರ್ಭದಲ್ಲಿ ಭವಾನಿ ರೇವಣ್ಣ ಅವರ ಭವಿಷ್ಯ ನಿರ್ಧಾರವಾಗಲಿದೆ.