ಬಿಡದಿಯಲ್ಲಿ ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ಪೊರಕೆಯಲ್ಲಿ ಹೊಡೆದ ರೈತ ಮಹಿಳೆಯರು

ರಾಮನಗರ: ಬಿಡದಿಯಲ್ಲಿ ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆದು ಬಿಡದಿ ರೈತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಡದಿ ಟೌನ್​ಶಿಪ್​​ಗೆ ವಿರೋಧದ ನಡುವೆ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು  ರೊಚ್ಚಿಗೆದ್ದಿದ್ದಾರೆ.  ಅಧಿಕಾರಿಗಳು ಎಷ್ಟೇ ಮನವಿ ಮಾಡಿದರೂ ರೈತರು ಬಿಡಲಿಲ್ಲ. ರೈತರು ಸರ್ವೆಗೆ ಬಂದ ಅಧಿಕಾರಿಗಳ ಕಾರನ್ನು ಸುತ್ತುವರಿದು, ಪೊರಕೆಯಿಂದ ಹೊಡೆದಿದ್ದಾರೆ.
ಯಾವುದೇ ಕಾರಣಕ್ಕೂ ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಒತ್ತಾಯಿಸಿದ್ದಾರೆ. ಬಲವಂತವಾಗಿ ಸರ್ವೇ ಕಾರ್ಯ ನಡೆಸಿದರೆ ಅಧಿಕಾರಿಗಳಿಗೆ ಪೊರಕೆ ಏಟು ಕೊಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದರ ಹೊರತಾಗಿಯೂ ಸರ್ವೆಗೆ ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ. 

 ರೈತ ಮಹಿಳೆಯರೂ ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಇದ್ದರೂ ರೈತರ ಆಕ್ರೋಶ ತಡೆಯಲು ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಶ್ರೀನಿವಾಸ ಗೌಡ ರೈತರೊಂದಿಗೆ ಮಾತುಕತೆ ನಡೆಸಿದ್ದಾರೆ.
ಎಎಸ್ಪಿ ರಾಮಚಂದ್ರಯ್ಯ, ಡಿವೈಎಸ್ಪಿ ಗಿರೀಶ್, ಶ್ರೀನಿವಾಸ್ ರಿಂದ ಮಾಹಿತಿ ಪಡೆದುಕೊಂಡಿದ್ದಾರೆ. 

ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಬೇಡಿ, ಅಧಿಕಾರಿಗಳ ಮೇಲೆ ಹಲ್ಲೆ, ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬೇಡಿ ಎಂದು ರೈತರಿಗೆ ಮನವಿ ಮಾಡಿದ್ದಾರೆ. 

More articles

Latest article

Most read