ಬಿಡದಿ ಟೌನ್‌ಶಿಪ್ ಚರ್ಚೆಗೆ ಹೆಚ್‌ಡಿಕೆಗೆ  ಪಂಥಾಹ್ವಾನ‌ :  ಜೂ.26ರಂದು ವಿಧಾನಸೌಧಕ್ಕೆ ಚರ್ಚೆಗೆ  ಬರುವಂತೆ ಪತ್ರ ಬರೆದ ಡಿ.ಕೆ.ಶಿವಕುಮಾರ್

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ  ಚರ್ಚೆಗೆ ಬರುವಂತೆ ಸಿಎಂ ಡಿಕೆಶಿ ದಿನಾಂಕ ಸಮೇತ ಎಚ್‌ಡಿಕೆಗೆ ಪತ್ರ ಬರೆದಿದ್ದಾರೆ. 

‘ತಾವು ಪ್ರಾರಂಭಿಸಿದ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ನಾನು ಉತ್ಸುಕನಾಗಿದ್ದು, ಜೂ.26ರಂದು ಬೆಳಗ್ಗೆ 11ಕ್ಕೆ ವಿಧಾನಸೌಧಕ್ಕೆ ತಾವು ಮತ್ತು ತಂಡದ ಐದು ಪ್ರತಿನಿಧಿಗಳೊಂದಿಗೆ ನನ್ನ ಕಚೇರಿಗೆ ಆಗಮಿಸುವಂತೆ ಕೋರುತ್ತೇನೆ’ ಎಂದು ಡಿ.ಕೆ. ಶಿವಕುಮಾರ್ ಅವರು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಇದಕ್ಕೂ ಮುನ್ನ ವಿಧಾನಸೌಧದಲ್ಲಿ ಮಾತನಾಡಿದ್ದ ಡಿ.ಕೆ. ಶಿವಕುಮಾರ್ ಅವರು, ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಪರವಾಗಿ ಜೆಡಿಎಸ್‌ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ ಎಂದು ಹೇಳಿದ್ದರು.

 ಇದಕ್ಕೆ ಪ್ರತಿಕ್ರಿಯಿಸಿರುವ ಎಚ್.ಡಿ. ಕುಮಾರಸ್ವಾಮಿ, ವಿಧಾನಸೌಧದಲ್ಲಿ ಚರ್ಚೆಗೆ ಆಹ್ವಾನಸಿರುವುದಕ್ಕೆ ಧನ್ಯವಾದಗಳು. ತಾವು ಪ್ರಸ್ತಾಪಿಸಿದ ಸಭೆ ವಿಧಾನಸೌಧದ ಬದಲು ರಾಮನಗರ ಜಿಲ್ಲೆಯ ಬಿಡದಿ ಅಥವಾ ಭಾದಿತ ಪ್ರದೇಶವಾದ ಬೈರಮಂಗಲದ ಯಾವುದಾದರೂ ಸೂಕ್ತ ಸಾರ್ವಜನಿಕ ಸ್ಥಳದಲ್ಲಿ ಕರೆಯುವುದು ಸಮಂಜಸ. ಜೂ.26ರಂದು ಪೂರ್ವನಿಗದಿತ ಕಾರ್ಯಕ್ರಮ ಇರುವುದರಿಂದ ಜೂ.27ರಂದು ಸಭೆ ನಡೆಯಲಿ. ಭಾದಿತ ವರ್ಗದ ಜನರನ್ನೂ ಸಭೆಗೆ ಆಹ್ವಾನಿಸಬೇಕು ಎಂದು ಕುಮಾರಸ್ವಾಮಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮರು ಪತ್ರ ಬರೆದಿದ್ದಾರೆ.

ಬಿಡದಿ ಸಮಗ್ರ ಉಪನಗರ ಯೋಜನೆ ಅನುಷ್ಠಾನದಿಂದ ಬಿಡದಿ ಹೋಬಳಿಯ ಎಂಟು ಗ್ರಾಮಗಳು ಮತ್ತು ಹಾರೋಹಳ್ಳಿ ತಾಲ್ಲೂಕಿನ ಒಂದು ಗ್ರಾಮದ ರೈತರು, ಗ್ರಾಮಸ್ಥರು ಮತ್ತು ಪಾಲುದಾರರು ಹಲವಾರು ಸಮಸ್ಯೆ ಮತ್ತು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೆ, ಈ ಭಾಗದಲ್ಲಿ ಅಪಾರ ಪರಿಸರ ಸಂಪತ್ತಿಗೆ ಹಾನಿಯಾಗುತ್ತಿದೆ.

ಈ ಗ್ರಾಮಗಳಲ್ಲಿ ರೈತರು, ಗ್ರಾಮಸ್ಥರು, ಕೃಷಿ ಕಾರ್ಮಿಕರು, ಹೈನುಗಾರಿಕೆ ಉದ್ಯಮದಲ್ಲಿರುವ ರೈತ ಮಹಿಳೆಯರು, ಸಣ್ಣ ವ್ಯಾಪಾರಸ್ಥರು, ಉದ್ಯಮಿಗಳು ಹಾಗೂ ಭಾದಿತ ಇತರೆ ಪಾಲುದಾರರನ್ನು ಭಾಗವಹಿಸಲು ಅವಕಾಶ ನೀಡಿದಲ್ಲಿ ಸಭೆಯಲ್ಲಿ ಮುಕ್ತ ಮನಸ್ಸಿನ ಚರ್ಚೆ ನಡೆಸಿ ಭಾದಿತ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶವಾಗುತ್ತದೆ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

More articles

Latest article

Most read