ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಒಂದು ತಿಂಗಳ ಗಡುವು

ಬೆಂಗಳೂರು : ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ ನಡೆಯಿತು.

ಈ ಹೋರಾಟದಲ್ಲಿ ನಟ ಪ್ರಕಾಶ್ ರಾಜ್ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಹಲವು ಪ್ರಮುಖ ರೈತ ನಾಯಕರು ಮತ್ತು ಸಾಮಾಜಿಕ ಹೋರಾಟಗಾರರು ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಹೋರಾಟದ ತೀವ್ರತೆಯನ್ನು ಮನಗಂಡ ಮುಖ್ಯಮಂತ್ರಿಗಳು ಮಧ್ಯಾಹ್ನ 3 ಗಂಟೆಗೆ ‘ಕೃಷ್ಣಾ’ ಗೃಹ ಕಚೇರಿಯಲ್ಲಿ ರೈತ ಮುಖಂಡರ ನಿಯೋಗದೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಬಿಡದಿ ಭಾಗದ ಸಣ್ಣ ಮತ್ತು ಮಧ್ಯಮ ಕ್ರಮಾಂಕದ ರೈತರು ಭಾಗವಹಿಸಿ, ನಾವು ಯಾವುದೇ ಕಾರಣಕ್ಕೂ ಜೀವನಾಧಾರವಾಗಿರುವ ಭೂಮಿಯನ್ನು ಮಾರಾಟ ಮಾಡಲು ಸಿದ್ಧರಿಲ್ಲ, ಟೌನ್‌ಶಿಪ್ ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಿ ನಮ್ಮ ಬದುಕನ್ನು ಉಳಿಸಿಕೊಡಬೇಕೆಂದು ಆಗ್ರಹಿಸಿದರು.

ಸಂಯುಕ್ತ ಹೋರಾಟದ ಮುಖಂಡರಾದ ನೂರ್ ಶ್ರೀಧರ್ ಮಾತನಾಡಿ, ಈ ಯೋಜನೆ ಕೃಷಿ, ಪರಿಸರ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ಹಾನಿಕಾರಕವಾಗಿದೆ ಎಂದರು. ಅಲ್ಲದೆ, ಜಸ್ಟಿಸ್ ಗೋಪಾಲಗೌಡರ ನೇತೃತ್ವದ ಸಮಿತಿಯು ನಡೆಸಿದ ಸಾರ್ವಜನಿಕ ವಿಚಾರಣೆಯ ವರದಿ ಹಾಗೂ ಶೇಕಡಾ 80ಕ್ಕೂ ಹೆಚ್ಚು ರೈತರು ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ಸಹಿ ಮಾಡಿರುವ ಬೃಹತ್ ಕಡತವನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಲಾಯಿತು.

ನಾಲ್ಕು ಹಕ್ಕೊತ್ತಾಯಗಳು

ಸರ್ಕಾರ ರಚಿಸುವ ಸಮಿತಿಯು ಕಾಲಹರಣ ಮಾಡದೆ ಒಂದು ತಿಂಗಳ ನಿಗದಿತ ಅವಧಿಯೊಳಗೆ ತನ್ನ ಕಾರ್ಯ ಮುಗಿಸಿ ವರದಿ ನೀಡಬೇಕು.
ಈ ಸಮಿತಿಯಲ್ಲಿ ಕಡ್ಡಾಯವಾಗಿ ಪರಿಸರ, ಕೃಷಿ ಮತ್ತು ಸಾಮಾಜಿಕ ತಜ್ಞರನ್ನು ಒಳಗೊಳ್ಳಬೇಕು.
ಸಮಿತಿಯ ಸದಸ್ಯರು ಬೆಂಗಳೂರಿನಲ್ಲೇ ಉಳಿಯದೆ ಖುದ್ದಾಗಿ ಬಿಡದಿ ರೈತರ ಜಮೀನುಗಳಿಗೆ ಭೇಟಿ ನೀಡಿ ರೈತರ ನೇರ ಅಭಿಪ್ರಾಯ ಸಂಗ್ರಹಿಸಬೇಕು.
ಸಮಿತಿಯ ಅಂತಿಮ ವರದಿ ಬಂದು ಈ ವಿಷಯ ಇತ್ಯರ್ಥವಾಗುವವರೆಗೆ ಬಿಡದಿ ಭೂಸ್ವಾಧೀನಕ್ಕೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆಯನ್ನು ಮುಂದುವರಿಸಬಾರದು.
ರೈತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, “ನಾನು ಅದೇ ಜಿಲ್ಲೆಯವನಾಗಿದ್ದು, ನೀವು ಬೆಳೆಸಿದ ಹಸಿರನ್ನು ಕಣ್ಣಾರೇ ಕಂಡಿದ್ದೇನೆ. ಹಸಿರು ನಾಶವಾಗುವುದನ್ನು ನಾನು ಬಯಸುವುದಿಲ್ಲ, ನೀವು ಕೃಷಿಯಲ್ಲಿ ಮುಂದುವರಿಯುವುದಾದರೆ ನನಗೂ ಸಂತೋಷವೇ ಎಂದು ಭರವಸೆ ನೀಡಿದರು. ಅಲ್ಲದೆ, ಬಲವಂತವಾಗಿ ಯಾರ ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಹಾಗೂ ರೈತರು ಭೂಮಿ ಮಾರಾಟ ಮಾಡಬೇಡಿ ಎಂದು ಸಲಹೆ ನೀಡಿದರು. ಹೋರಾಟಗಾರರು ನೀಡುವ ಶಫಾರಸುಗಳನ್ನು ಪರಿಗಣಿಸಿ ಸಮಿತಿಯನ್ನು ರಚಿಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು
ಸರ್ಕಾರದ ಭರವಸೆಯನ್ನು ಸ್ವಾಗತಿಸಿರುವ ಹೋರಾಟಗಾರರು, ತಮ್ಮ ಮೂಲ ಹೋರಾಟದ ಸ್ಥಳವಾದ ಬೈರಮಂಗಲದಲ್ಲಿ ಪ್ರತಿಭಟನೆಯನ್ನು ಮುಂದುವರಿಸಲಿದ್ದಾರೆ. 1 ತಿಂಗಳ ಕಾಲಮಿತಿಯೊಳಗೆ ಸೂಕ್ತ ಅಂತಿಮ ತೀರ್ಮಾನ ಬರದಿದ್ದರೆ ಮತ್ತೆ ಬೆಂಗಳೂರಿನಲ್ಲಿ ಬೃಹತ್ ಹೋರಾಟ ರೂಪಿಸುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್, ಚುಕ್ಕಿ ನಂಜುಡಸ್ವಾಮಿ, ಸಾಮಾಜಿಕ ಕಾರ್ಯಕರ್ತ ಎಸ್‌.ಆರ್.ಹಿರೇಮಠ್, ದರ್ಶನ್ ಪುಟ್ಟಣಯ್ಯ, ಬಡಗಲಪುರ ನಾಗೇಂದ್ರ, ನೂರ್ ಶ್ರೀಧರ್, ಎಸ್. ವರಲಕ್ಷ್ಮೀ, ಬಸವರಾಜಪ್ಪ, ಲಕ್ಷ್ಮಣ್ ಹೂಗಾರ್ ಮತ್ತಿತರರು ಭಾಗವಹಿಸಿದ್ದರು

More articles

Latest article

Most read