ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎರಡನೇ ಆರೋಪಿಯಾದ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಇನ್ನೆರಡು ದಿನಗಳಲ್ಲಿ ಮುಕ್ತಾಯವಾಗಲಿದೆ. ನಟ ದರ್ಶನ್, ಪವಿತ್ರಾಗೌಡ, ಆರ್.ನಾಗರಾಜು, ಎಂ.ಲಕ್ಷ್ಮಣ್, ಅನುಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಶ್ ಅವರು ರೆಗ್ಯುಲರ್ ಜಾಮೀನು ಅರ್ಜಿ ವಿಚೃಣೆ ಇಂದು ಪೂರ್ಣಗೊಳ್ಳುವ ಸಾಧ್ಗಯತೆಗಳಿದ್ದು, ತೀರ್ಪು ಪ್ರಕಟಾಗಲೂ ಬಹುದು. ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸುತ್ತಿದೆ.
ರೆಗ್ಯುಲರ್ ಜಾಮೀನು ಸಿಗದಿದ್ದರೆ ಅಥವಾ ತೀರ್ಪು ತಡವಾದರೆ ಸಮಸ್ಯೆಯಾದೀತು ಎಂದು ದರ್ಶನ್ ಪರ ವಕೀಲರು ಹಾಲಿ ಇರುವ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡಿ ಎಂದು ಹೈಕೋರ್ಟ್‌ಗೆ ಈಗಾಗಲೇ ಮನವಿ ಮಾಡಿದ್ದಾರೆ. ದರ್ಶನ್ ಅವರಿಗೆ ಇನ್ನೂ ಶಸ್ತ್ರಚಿಕಿತ್ಸೆಯಾಗಿಲ್ಲ, ಹೀಗಾಗಿ, ಮತ್ತಷ್ಟು ದಿನ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ನಟ ದರ್ಶನ್‌ಗೆ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಅರ್ಜಿಯ ವಿಚಾರಣೆ ಇಂದು ಅಥವಾ ನಾಳೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ದರ್ಶನ್ ತೂಗುದೀಪ ಅವರು ತಮ್ಮ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಮೆಸೇಜ್ ಮಾಡುತ್ತಿದ್ದ. ಇದೇ ಕಾರಣಕ್ಕೆ ಆತನನ್ನು ಕರೆತಂದು ಹಲ್ಲೆ ನಡೆಸಿದ್ದರು. ಆತ ಮೃತಪಟ್ಟ ಪ್ರಕರಣದಲ್ಲಿ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ಬಂಧನವಾಗಿತ್ತು.