ಸಿಟಿ ರವಿಗೆ ಬಿಗ್ ರಿಲೀಫ್; ಜಾಮೀನು ನೀಡಿದ ಹೈಕೋರ್ಟ್

Most read

ಬೆಂಗಳೂರು: ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಶ್ಲೀಲ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ರವಿ ವಿರುದ್ಧ ಎಫ್ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ. ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿ ಜಾಮೀನು ನೀಡಿದೆ.. ಅತ್ತ ಜಾಮೀನಿಗಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂಡೂಡಿದ್ದರೆ ಇತ್ತ ಹೈಕೋರ್ಟ್‌ನಲ್ಲಿ ಸಿಟಿ ರವಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಆರೋಪಿ, ಫಿರ್ಯಾದಿ ಇಬ್ಬರೂ ಜನಪ್ರತಿನಿಧಿಗಳು. ವಿಧಾನ ಪರಿಷತ್ ನಲ್ಲಿ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಈ ಪ್ರಕರಣದಲ್ಲಿ ಆರೋಪಗಳಿಗೆ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಿದೆ. 41 ಎ ಅಡಿ ನೋಟಿಸ್ ನೀಡಬೇಕಿತ್ತು. ಪೊಲೀಸರು ಬಂಧನಕ್ಕೆ ಕಾರಣಗಳನ್ನು ನೀಡಬೇಕಿತ್ತು. ಆದರೆ ಈ ಪ್ರಕ್ರಿಯೆಗಳ ಬಗ್ಗೆ ದಾಖಲೆಗಳನ್ನು ಒದಗಿಸಿಲ್ಲ. ಪೊಲೀಸರು ಹಲ್ಲೆ ನಡೆಸಿದ್ದರಿಂದ ಗಾಯಗಳಾಗಿವೆ ಎಂದು ಸಿಟಿ ರವಿ ವಕೀಲರು ವಾದಿಸಿದ್ದಾರೆ. ಚಿಕಿತ್ಸೆಯ ವಿವರವನ್ನು ವೈದ್ಯಾಧಿಕಾರಿ ಸರಿಯಾಗಿ ನಮೂದಿಸಿಲ್ಲ. ಆದರೆ ಸ್ಕ್ಯಾನಿಂಗ್ ಮಾಡಿಸಿರುವುದಾಗಿ ವರದಿಯಿದೆ. ಏನನ್ನೂ ರೆಕಾರ್ಡ್ ಮಾಡಿಲ್ಲವೆಂದು ಸಭಾಪತಿ ಹೇಳಿಕೆ ನೀಡಿದ್ದಾರೆ. ರವಿಯನ್ನು ಬಂಧಿಸಲು ಹಲ್ಲೆ ನಡೆಸುವ ಅಗತ್ಯವಿರಲಿಲ್ಲ. ಕಾನೂನು ಕ್ರಮ ಪಾಲಿಸಿ ಕ್ರಮ ಕೈಗೊಳ್ಳಬಹುದಿತ್ತು. ವಿಧಾನಪರಿಷತ್ ಪ್ರತಿಪಕ್ಷದ ಶಾಸಕರಾಗಿದ್ದಾರೆ. ಹೀಗಾಗಿ ಪರಾರಿಯಾಗುವ ಸಾಧ್ಯತೆ ಇಲ್ಲ. ಇದರಿಂದ ತಕ್ಷಣ ಬಿಡುಗಡೆಗೆ ನ್ಯಾಯಮೂರ್ತಿ ಎಂ.ಜಿ.ಉಮಾ ನೇತೃತ್ವದ ಪೀಠವು ಆದೇಶ ನೀಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ನ್ಯಾ.ಸಂತೋಷ್ ಗಜಾನನ ಭಟ್ ವಿಚಾರಣೆ ನಡೆಸಿದರು. ಸಿ.ಟಿ.ರವಿ ಪರ ಅಶೋಕ್ ಹಾರನಹಳ್ಳಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪರ ಶ್ಯಾಮ್ ಸುಂದರ್ ವಾದ ಮಂಡಿಸಿದರು.

ಅಶೋಕ್ ಹಾರನಹಳ್ಳಿ ವಾದ ಮಂಡಿಸಿ ಸಿ.ಟಿ.ರವಿ ಬಂಧಿಸುವಾಗ ಯಾವುದೇ ಕಾರಣ ನೀಡಿಲ್ಲ. ಬಂಧಿಸದಿದ್ದರೆ ಪರಾರಿಯಾಗುವ ಭೀತಿ ಇದೆ ಎಂದು ಉಲ್ಲೇಖಿಸಿದ್ದಾರೆ. ಬಂಧಿಸಿದ ನಂತರ ಸಭಾಪತಿಗೆ ತಿಳಿಸಿದ್ದಾರೆ. ಖಾನಾಪುರದಲ್ಲಿ ಅರೆಸ್ಟ್ ಎಂದು ಉಲ್ಲೇಖ. ಆದರೆ, ಅರೆಸ್ಟ್ ಆಗಿದ್ದು ಸುವರ್ಣಸೌಧದಲ್ಲಿ ಎಂದರು. BNS 173 ಪ್ರಕಾರ FIRನಲ್ಲಿ ದೂರುದಾರನ ಸಹಿ ಇರಬೇಕು. ಆದರೆ, ದೂರಿನ ಪ್ರತಿಗೆ ಹೆಬ್ಬಾಳ್ಕರ್ ಸಹಿ ಹಾಕಿಲ್ಲ. ಬಂಧಿತನಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಆದರೆ, ಸಿ.ಟಿ.ರವಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ. ಸಿ.ಟಿ.ರವಿಗೆ ಏಕೆ ಮಧ್ಯಂತರ ಜಾಮೀನು ನೀಡಬೇಕು. ಸಚಿವೆ ಹೆಬ್ಬಾಳ್ಕರ್ ಪರ ವಕೀಲ ಶ್ಯಾಂ ಸುಂದರ್ ವಾದ ಮಂಡಿಸಿ ಆ ಅಶ್ಲೀಲ ಪದದಿಂದ 10 ಬಾರಿ ಕರೆದಿದ್ದಾರೆ. ಆದ್ದರಿಂದ ಏಕೆ ಮಧ್ಯಂತರ ಜಾಮೀನು ನೀಡಬೇಕು ಎಂದರು.

More articles

Latest article