Wednesday, May 22, 2024

ಬಿಗ್ ಬಾಸ್’ನಲ್ಲಿದ್ದ ಡ್ರೋನ್ ಪ್ರತಾಪ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು : ತಂದೆ ಬೇಸರ!

Most read

ಬುಗ್ ಬಾಸ್ ಶುರುವಾದ ದಿನದಿಂದಲೂ ಒಂದಲ್ಲ ಒಂದು ವಿವಾದಕ್ಕೆ ಕಾರಣವಾಗಿದೆ. ಈಗ ಬಿಗ್ ಬಾಸ್ ನಲ್ಲಿ ಇದ್ದ ಡ್ರೋನ್ ಪ್ರತಾಪ್ ಆನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಅಧಿಕೃತ ಮಾಹಿತಿ ದೊರೆತಿದೆ.

ನಿನ್ನೆ ರಾತ್ರಿಯಿಂದಲೇ ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಡ್ರೋನ್ ಪ್ರತಾಪ್ (Drone Pratap) ಕಾಣಿಸಿಕೊಂಡಿಲ್ಲ. ಮನೆಯರ ಮೇಲೆ ಬೇಸರಗೊಂಡಿದ್ದ ಡ್ರೋನ್ ಪ್ರತಾಪ್, ನಿನ್ನೆ ಊಟ, ತಿಂಡಿ ಬಿಟ್ಟಿದ್ದ. ಆದರೆ ಸಮಾಜಿಕ ಜಾಲತಾಣದಲ್ಲಿ ಪ್ರತಾಪ್ ವಿಟಮಿನ್ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿತ್ತು. ಆದರೆ ಇದಕ್ಕೆ ಈಗ ಬಿಗ್ ಬಾಸ್ ತೆರೆ ಎಳೆದಿದ್ದು ಇದು ಫುಡ್ ಪಾಯಿಸನ್ ಆಗಿ ಆಸ್ಪತ್ರೆಗೆ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಬಿಗ್‌ ಬಾಸ್‌ ಮನೆಯಲ್ಲಿ ಅನಾರೋಗ್ಯಕ್ಕೀಡಾದ ಪ್ರತಾಪ್‌ ಅವರನ್ನು ತಕ್ಷಣವೇ ಎಸ್ಎಸ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದ್ದು ಅಲ್ಲಿಯೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಖಾಸಗಿ ಮಾಧ‌್ಯಮಕ್ಕೆ ಮಾಹಿತಿ ನೀಡಿರುವ ಪ್ರತಾಪ್ ತಂದೆ ಮರಿಮಾದಯ್ಯ, ಮಗನಿಗೆ ಫುಡ್ ಪಾಯ್ಸನ್ ಆಗಿ ಜ್ವರ ಬಂದಿದೆ ಅಂತಾ ಮಾಹಿತಿ ನೀಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 1ದಿನ ರೆಸ್ಟ್ ಮಾಡಲು ಹೇಳಿದ್ದಾರೆ.

ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ. ಇನ್ನ ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳಿದ್ದಾರೆ. ಅವರಿಗೆ ವೋಟ್ ಮಾಡಿ’ ಎಂದು ಪೋಸ್ಟ್ ಮಾಡಿದ್ದಾರೆ.

More articles

Latest article