ಪಟ್ನಾ: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ಎನ್‌ಡಿಎ ಮತ್ತು ಮಹಾಘಟಬಂಧನ್ ಭವಿಷ್ಯ ನಿರ್ಧಾರವಾಗಲಿದೆ.
243 ವಿಧಾನಸಭಾ ಕ್ಷೇತ್ರಗಳ ಬಿಹಾರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 122 ಸ್ಥಾನಗಳ ಅವಶ್ಯಕತೆ ಇದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ. ಬಿಗಿಭದ್ರತೆ ನಡುವೆ ಮತ ಎಣಿಕೆ 46 ಕೇಂದ್ರಗಳಲ್ಲಿ ನಡೆಯಲಿದೆ.
ಈ ಬಾರಿ ಬಿಹಾರದಲ್ಲಿ ದಾಖಲೆಯ ಮತದಾನ ನಡೆದಿದ್ದು ಅಧಿಕಾರ ಯಾರ ಪಾಲಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಆದರೂ ಕಾಂಗ್ರೆಸ್ ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಮತಗಟ್ಟೆ ಸಮೀಕ್ಷಗಳು ಸುಳ್ಳಾಗಲಿದೆ ಎಂದು ಪ್ರತಿಪಾದಿಸಿದೆ.
ಬಿಹಾರದಲ್ಲಿ ಶೇ. 66.91 ಮತದಾನವಾಗಿದ್ದು, ಇದು ಬಿಹಾರ ಚುನಾವಣಾ ಇತಿಹಾಸದಲ್ಲಿ ದಾಖಲೆಯಾಗಿದೆ. ಮೊದಲ ಹಂತದಲ್ಲಿ ಶೇ. 65.08 ರಷ್ಟು ಮತ್ತು ಎರಡನೇ ಹಂತದಲ್ಲಿ ಶೇ.68.76 ಮತದಾನ ನಡೆದಿದೆ.
ಒಂದು ವೇಳೆ ಎನ್ ಡಿಎ ಅಧಿಕಾರ ಹಿಡಿದರೆ ನಿತೀಶ್‌ಕುಮಾರ್ ಐದನೆ ಬಾರಿ ಮುಖ್ಯಮಂತ್ರಿಯಾಗಲಿದ್ದಾರೆ. ಇಂಡಿಯಾ ಒಕ್ಕೂಟ ಅದಿಕಾರ ಹಿಡಿದರೆ ಮಾಜಿ ಸಿಎಂ ಲಾಲೂ ಪ್ರಸಾದ್ ಪುತ್ರ ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಲಿದ್ದಾರೆ.

