ಬಿಹಾರ ವಿಧಾನಸಭೆ: ಸೀಟು ಹಂಚಿಕೆಗೆ ಎನ್‌ ಡಿಎ ಮೈತ್ರಿಕೂಟದಲ್ಲಿ ಭುಗಿಲೆದ್ದ ಅಪಸ್ವರ

Most read

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಆಡಳಿಆತಾರೂಢ ಎನ್‌ ಡಿಎ ಮೈತ್ರಿಕೂಟ ಈಗಾಗಲೇ ಸೀಟುಗಳನ್ನು ಹಂಚಿಕೆ ಮಾಡಿದ ಬೆನ್ನಲ್ಲೇ ಮಿತ್ರಪಕ್ಷಗಳಲ್ಲಿ ಅಪಸ್ವರ ಎದ್ದಿದೆ. ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಅಪಸ್ವರ ಎತ್ತಿವೆ.

ರಾಷ್ಟ್ರೀಯ ಲೋಕ ಮೋರ್ಚಾ ಪಕ್ಷದ (ಆರ್‌ಎಲ್‌ಎಂ) ಅಧ್ಯಕ್ಷ, ರಾಜ್ಯಸಭಾ ಸದಸ್ಯ ಉಪೇಂದ್ರ ಕುಶ್ಚಾಹಎನ್‌ಡಿಎ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿರುವ ಅವರು ನಮ್ಮ ಪಕ್ಷಕ್ಕೆ ಕೇವಲ 6 ಸ್ಥಾನಗಳನ್ನು ಮಾತ್ರ ನೀಡಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ. ಎಲ್ಲವೂ ಸರಿಯಾಗಲಿದೆ ಎಂಬ ನಂಬಿಕೆಯೊಂದಿಗೆ ದೆಹಲಿಗೆ ಹೋಗುತ್ತಿದ್ದೇನೆ ಎಂದಿದ್ದಾರೆ. ದೆಹಲಿಯಲ್ಲಿ ಅವರು ಬಿಜೆಪಿ ವರಿಷ್ಠರನ್ನು ಬೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ಕೆಲವು ಕ್ಷೇತ್ರಗಳನ್ನು ತಮ್ಮ ಅಭಿಪ್ರಾಯ ಕಡೆಗಣಿಸಿ ಲೋಕ ಜನಶಕ್ತಿ ಪಕ್ಷಕ್ಕೆ (ರಾಮ್ ವಿಲಾಸ್) ಹಂಚಿಕೆ ಮಾಡಿದ್ದಕ್ಕೆ ಅವರು ಕುಪಿತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕುಶ್ವಾಹ ಅವರು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಪಟ್ನಾದಲ್ಲಿ ಬಿಜೆಪಿ ಮುಖಂಡರಾದ ಕೇಂದ್ರ ಸಚಿವ ನಿತ್ಯಾನಂದ ರಾಯ್ ಮತ್ತತರರು ಅವರನ್ನು ಭೇಟಿಯಾಗಿ ಮನವೊಲಿಸಲು ಮಾಡಿದ ಪ್ರಯತ್ನಗಳು ಸಫಲಗೊಂಡಿಲ್ಲ.

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಎಲ್‌ಜಿಪಿ (ರಾಮ್ ವಿಲಾಸ್) 29, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ಆರ್‌ಎಲ್‌ಎಂ ಪಕ್ಷಗಳಿಗೆ ತಲಾ ಆರು ಸ್ಥಾನಗಳನ್ನು ನೀಡಲಾಗಿದೆ.

ಈ ಹಂಚಿಕೆ ಸೂತ್ರಕ್ಕೆ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಅಧ್ಯಕ್ಷ, ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರೂ  ಅಸಮಾಧಾನ ವ್ಯಕ್ತಪಡಿಸಿದ್ದಾರೆ.

More articles

Latest article