ರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನು ರದ್ದಾದ ಬಳಿಕ ನಟ ದರ್ಶನ್‌, ಅವರ ಆಪ್ತ ಗೆಳತಿ ಪವಿತ್ರಾ ಗೌಡ ಬಂಧನ

Most read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನುಕುಮಾರ್ ಮತ್ತು ಜಗದೀಶ್ ಬಂಧನಕ್ಕೆ ಪೊಲೀಸರು ಚಿತ್ರದುರ್ಗಕ್ಕೆ ತೆರಳಿದ್ದಾರೆ.

ಹೊಸಕೆರೆಯಲ್ಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಖಾಸಗಿ ಅಪಾರ್ಟ್ ಮೆಂಟ್ ನ 15ನೇ ಮಹಡಿಯಲ್ಲಿರುವ ನಿವಾಸದಿಂದ  ಪ್ರಕರಣದ ಎ-2 ಆರೋಪಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಎ-1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳ ಆರೋಗ್ಯ ತಪಾಸಣೆ ನಡೆಸಿ ನ್ಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ನಂತರ ಎಲ್ಲ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗುತ್ತದೆ.

More articles

Latest article