ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ರೂ. 1 ಸಾವಿರ ಹೆಚ್ಚಳ; ಎತ್ತಿನಹೊಳೆ ಯೋಜನೆಗೆ ₹553 ಕೋಟಿ ಮೀಸಲು

Most read

ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.

ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ರೂ. 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.

2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂ. ಇತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿದ್ದು, ಕಳೆದ ಬಜೆಟ್ಗಿಂತ ಈ ಬಾರಿ 38,166 ಕೋಟಿ ಹೆಚ್ಚಳವಾಗಿದೆ.

ದಗ ಜಿಲ್ಲೆ ಡಂಬಳಕ್ಕೆ ತೋಟಗಾರಿಕೆ ಕಾಲೇಜು ಮಂಜೂರು
ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಕೃಷಿ ಕಾಲೇಜು ಮಂಜೂರು
ವಿಜಯಪುರ ಜಿಲ್ಲೆ ಮುದ್ದೆ ಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ ಆರಂಭ
ಮಲ್ಟಿಪ್ಲೆಕ್ಸ್ಗಳಲ್ಲಿ ಏಕರೂಪದ ಟಿಕೆಟ್ ದರ ಜಾರಿಗೆ ಬರಲಿದ್ದು, ಟಿಕೆಟ್ ದರ ₹200 ಮಾತ್ರ ಇರಲಿದೆ.

ಕಲಬುರಗಿಯಲ್ಲಿ ಒಂದು ಹೊಸ ಮೆಗಾ ಡೈರಿ ನಿರ್ಮಾಣವಾಗಲಿದೆ. ಅಲೆಮಾರಿ ಜನಾಂಗದ ಅಭಿವೃದ್ಧಿಗೆ ₹100 ಕೋಟಿ ಮೀಸಲಿಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪನೆಯಾಗಲಿದೆ. ಕೊಪ್ಪಳ ಜಿಲ್ಲೆಯ ಬೂದುಗುಂಪದಲ್ಲಿ ₹25 ಕೋಟಿ ವೆಚ್ಚದಲ್ಲಿ ಕುರಿಮೇಕೆ ಮಾರುಕಟ್ಟೆ ನಿರ್ಮಾಣವಾಗಲಿದೆ. 2A ಮತ್ತು 2B ಗುತ್ತಿಗೆದಾರರಿಗೆ ಮೀಸಲಾತಿ ಕಲ್ಪಿಸಲಾಗುವುದು. ಎತ್ತಿನಹೊಳೆ ಯೋಜನೆಗೆ ₹553 ಕೋಟಿ ಹಾಗೂ ವೃಷಭಾವತಿ ಕಣಿವೆ ಯೋಜನೆಗೆ ₹180 ಕೋಟಿ ಮೀಸಲಿಡಲಾಗಿದೆ.

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರ ಮುಂದಾಗಿದ್ದು, 50 ಪ್ರೌಢಶಾಲೆಗಳನ್ನು ಉನ್ನತೀಕರಿಸಲಾಗುವುದು. ಜೊತೆಗೆ, 500 ಹೊಸ ಸರ್ಕಾರಿ ಶಾಲೆಗಳನ್ನು ಪ್ರಾರಂಭಿಸಿ, 100 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲಾಗುವುದು. ವಿದ್ಯಾರ್ಥಿಗಳ ವಸತಿ ಸೌಕರ್ಯವನ್ನು ಸುಧಾರಿಸಲು ಹಾಸ್ಟೆಲ್ಗಳ ದುರಸ್ತಿಗೆ 25 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಅಥಣಿಯಲ್ಲಿ ಹೊಸ ಕೃಷಿ ಕಾಲೇಜೊಂದನ್ನು ಸ್ಥಾಪಿಸುವ ಮೂಲಕ ಕೃಷಿ ಶಿಕ್ಷಣಕ್ಕೂ ಉತ್ತೇಜನ ನೀಡಲಾಗುವುದು.

ಕೈಗಾರಿಕೆಗಳ ಬೆಳವಣಿಗೆಗೆ 13,692 ಕೋಟಿ ರೂಪಾಯಿ ಸಹಾಯಧನ ನೀಡಲಾಗುವುದು. ಹೂಡಿಕೆಯನ್ನು ಹೆಚ್ಚಿಸುವ ಮೂಲಕ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದು ಇದರ ಉದ್ದೇಶವಾಗಿದೆ. 2024-25ನೇ ಸಾಲಿನಲ್ಲಿ ಸೇವಾ ವಲಯವು ಗಣನೀಯವಾಗಿ ಬೆಳೆಯುವ ನಿರೀಕ್ಷೆಯಿದೆ. ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಹಲವಾರು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಜೊತೆಗೆ, ಮಾನವ ಸಂಪನ್ಮೂಲ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ.

ಈ ಬಾರಿ ಅಸಹಾಯಕರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನಮ್ಮ ರಾಜ್ಯವು ದೇಶದ ಜಿಡಿಪಿಗೆ 8.4% ರಷ್ಟು ಕೊಡುಗೆ ನೀಡುತ್ತಿದೆ. ದೇಶದ ಆರ್ಥಿಕತೆಯು 6.4% ರಷ್ಟು ಬೆಳವಣಿಗೆ ಕಂಡಿದ್ದರೆ, ನಮ್ಮ ರಾಜ್ಯವು ಇನ್ನೂ ಹೆಚ್ಚಿನ ಆರ್ಥಿಕ ಪ್ರಗತಿಯನ್ನು ಸಾಧಿಸಿದೆ. ಹೆಚ್ಚಿನ ಉದ್ಯೋಗಗಳು ರಾಜ್ಯದಲ್ಲಿ ಸೃಷ್ಟಿಯಾಗುತ್ತಿವೆ. ನಮ್ಮ ಗುರಿ 20 ಲಕ್ಷ ಉದ್ಯೋಗ ಸೃಷ್ಟಿಸುವುದು.
ಬ್ರಾಂಡ್ ಬೆಂಗಳೂರಿಗೆ 1800 ಕೋಟಿ ರೂಪಾಯಿ ವೆಚ್ಚದಲ್ಲಿ 21 ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಹವಾಮಾನ ವೈಪರೀತ್ಯಗಳನ್ನು ನಿಯಂತ್ರಿಸಲು ಹಾಗೂ ಒಳಚರಂಡಿ ಮತ್ತು ಎಸ್ಟಿಪಿ ಸೌಲಭ್ಯಗಳನ್ನು ಸುಧಾರಿಸಲು 3000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಕಾವೇರಿ ನದಿಯಿಂದ ನೀರು ಪೂರೈಸುವ 5ನೇ ಹಂತದ ಯೋಜನೆಗೆ 555 ಕೋಟಿ ರೂಪಾಯಿಗಳನ್ನು ಬಳಸಲಾಗುವುದು, ಇದರಿಂದ 110 ಹಳ್ಳಿಗಳಿಗೆ ಕುಡಿಯುವ ನೀರು ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಮೆಟ್ರೋ ಜಾಲವನ್ನು 98.60 ಕಿ.ಮೀ.ಗೆ ವಿಸ್ತರಿಸಲಾಗುವುದು, ಇದರಲ್ಲಿ ದೇವನಹಳ್ಳಿಗೆ ಸಂಪರ್ಕವೂ ಸೇರಿದೆ.

More articles

Latest article