Wednesday, December 11, 2024

ಬಿಜೆಪಿ ಕೋರ್ ಕಮಿಟಿ ಸಭೆ; ಉಪ ಚುನಾವಣೆ ಸೋಲು, ವಿಜಯೇಂದ್ರ ಯತ್ನಾಳ್ ಗುಂಪುಗಳ ಭಿನ್ನಮತ ಕುರಿತು ಚರ್ಚೆ

Most read

ಬೆಂಗಳೂರು: ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿನ ಸೋಲು, ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಂಪುಗಳ ವೈಮನಸ್ಸು, ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರ ಪಕ್ಷ ವಿರೋಧಿ ಚಟುವಟಿಕೆ ಸೇರಿದಂತೆ ಹಲವು ವಿಷಯಗಳನ್ನು ಕುರಿತು ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಪಕ್ಷದ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ ವಾಲ್ ನೇತೃತ್ವದಲ್ಲಿ ಸಭೆ ನಡೆದಿದೆ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ಪಕ್ಷ ವಿರೋಧಿ ಚಟುವಟಿಕೆಗಳನ್ನು ಕುರಿತು ಹೈಕಮಾಂಡ್ಗೆ ದೂರು ನೀಡಲು ನಿರ್ಧರಿಸಲಾಗಿದೆ.

ಆದರೆಈ ಸಭೆಯಲ್ಲಿ ವಿಜಯೇಂದ್ರ ಬಣದ ನಾಯಕರು ಭಾಗಿಯಾಗಿದ್ದರು. ಯತ್ನಾಳ್ ಬಣದ ಯಾರೊಬ್ಬರೂ ಸಭೆಗೆ ಆಗಮಿಸಿರಲಿಲ್ಲ. ಎರಡೂ ಗುಂಪುಗಳ ನಡುವಿನ ಕಿತ್ತಾಟ ಕುರಿತು ವಿಸ್ತೃತ ಚರ್ಚೆ ನಡೆದಿದೆ. ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದ್ದರೂ ಯತ್ನಾಳ್ ಬಣ ವಿಜಯೇಂದ್ರ ಅವರನ್ನು ಒಪ್ಪುತ್ತಿಲ್ಲ. ಇನ್ನು 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಸೋಲಿನ ಬಗ್ಗೆಯೂ ಪರಾಮರ್ಶೆ ಮಾಡಲಾಗಿದೆ. ಸೋಲಿನ ವರದಿ ಪಡೆಯಲು ಸಮಿತಿ ರಚನೆಗೆ ಕೋರ್ ಕಮಿಟಿ ನಿರ್ಧಾರ ಮಾಡಲಾಗಿದೆ.

More articles

Latest article