‘ಮುಡಾ’ ಬದಲಿ ಸೈಟ್ ಹಂಚಿಕೆ ನೀತಿ ಮಾಡಿದ್ದೇ ಬಿಜೆಪಿ: ಎಂಬಿ ಪಾಟೀಲ್

Most read

ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು ಎಂದು ಕೈಗರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಈ ವಿಚಾರ ಕುರಿತು ಮಾತನಾಡಿರುವ ಕೈಗರಿಕೆ ಸಚಿವ ಎಂಬಿ ಪಾಟೀಲ್ ಅವರು, ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು. ಸೈಟುಗಳನ್ನು ಹಂಚಿದ್ದೂ ಅವರೇ. ಈಗ ಜನರ ದಿಕ್ಕು ತಪ್ಪಿಸಲು ಪಾದಯಾತ್ರೆಯ ನಾಟಕ ಆಡಲು ಹೊರಟಿದ್ದಾರೆ ಎಂದು ಸಚಿವರು ಟೀಕಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಬೇಕಾದರೆ ಪಾದಯಾತ್ರೆ ಮಾಡಿಕೊಳ್ಳಲಿ. ಅವರ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶೇಕಡಾ 40ರಷ್ಟು ಕಮೀಷನ್, ಕೋವಿಡ್ ಕಾಲದ ಹಗರಣ, ಮಾರಿಷಸ್ ನಲ್ಲಿ ಇಟ್ಟಿದ್ದಾರೆ ಎನ್ನಲಾಗುತ್ತಿರುವ ಹತ್ತು ಸಾವಿರ ಕೋಟಿ ರೂಪಾಯಿ ಹಗರಣಗಳ ಬಗ್ಗೆ ಅವರು ಜನತೆಗೆ ಸತ್ಯ ತಿಳಿಸಲಿ ಎಂದು ಅವರು ತಿರುಗೇಟು ನೀಡಿದರು.

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ನಾಯಕರಾದ ಅಶ್ವತ್ಥ್ ನಾರಾಯಣ, ರಮೇಶ್ ಜಾರಕಿಹೊಳಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೀಗೆ ಇಪ್ಪತ್ತು ಗುಂಪುಗಳಿವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆಯೇ ಒಮ್ಮತವಿಲ್ಲ. ಎಂದು ಟೀಕಿಸಿದ್ದಾರೆ.

More articles

Latest article