ದೆಹಲಿಯಲ್ಲಿ ಬಿಜೆಪಿ ಗೂಡಾಗಿರಿ; ಕೇಜ್ರಿವಾಲ್‌ ಆರೋಪ

Most read

ನವದೆಹಲಿ: ಎಎಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. ದೆಹಲಿ ಪೊಲೀಸರು ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆದರುತ್ತಿದ್ದಾರೆ ಎಂದು ಎಎಪಿ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೋಮವಾರ ಆಪಾದಿಸಿದ್ದಾರೆ. ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು ಕೇಜ್ರಿವಾಲ್‌ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ದೇಶದ ಕಾನೂನಿಗೆ ಹೆದರದ ಈ ದೊಡ್ಡ ಗೂಂಡಾ ಯಾರು? ಪತ್ರಕರ್ತರನ್ನು ಬಂಧಿಸುವ ಮತ್ತು ಎಎಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಬಹಿರಂಗವಾಗಿ ಹಲ್ಲೆ ನಡೆಸುತ್ತಿರುವ ಈ ಗೂಂಡಾ ಯಾರು? ದೆಹಲಿ ಪೊಲೀಸರಿಗೆ ಆದೇಶ ನೀಡುತ್ತಿರುವ, ಭಯ ಮತ್ತು ಅಸಹಾಯಕತೆಯನ್ನು ಅನುಭವಿಸುವಂತೆ ಮಾಡಿರುವ ಈ ಗೂಂಡಾ ಯಾರು? ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ಒಂದು ಕಡೆ, ಒಂದು ನಮ್ಮ ಪಕ್ಷವು ಸಾಮಾನ್ಯ ಜನರಿಗೆ ತಿಂಗಳಿಗೆ ರೂ.25,000 ಹಣ ಉಳಿಸುತ್ತಿದೆ, ಮತ್ತೊಂದು ಪಕ್ಷ ಗೂಂಡಾಗಿರಿಯಲ್ಲಿ ತೊಡಗಿದೆ ಎಂದು ಬಿಜೆಪಿಯನ್ನು ಗುರಿಯಾಗಿಸಿ ಹೇಳಿದರು. ಇದೇ ವೇಳೆ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್‌ ಅವರನ್ನು ಉಲ್ಲೇಖಿಸಿ, ವೈಯಕ್ತಿಕ ಲಾಭಕ್ಕಾಗಿ ರಾಜಿ ಮಾಡಿಕೊಂಡು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಸಿಲುಕಿಸಬೇಡಿ, ದೇಶದ ಭವಿಷ್ಯವನ್ನು ಪಣಕ್ಕಿಡಬೇಡಿ ಎಂದು ನಾನು ವಿನಂತಿಸುತ್ತೇನೆ ಎಂದೂ ಚುನಾವಣಾ ಆಯುಕ್ತರಿಗೆ ಮನವಿ ಮಾಡಿಕೊಂಡರು.

More articles

Latest article