ಬಿಜೆ‍ಪಿ ಸರ್ಕಾರದಲ್ಲಿ ಶೇ. 40 ಲಂಚ; ತನಿಖೆಗೆ ಎಸ್‌ ಐಟಿ ರಚಿಸಲು ಸಚಿವ ಸಂಪುಟ ತೀರ್ಮಾನ

Most read

ಬೆಂಗಳೂರು: ಬಿಜೆ‍ಪಿ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯಗುತ್ತಿಗೆದಾರರ ಸಂಘ ಮಾಡಿದ್ದ ಶೇ. 40ರ ಲಂಚ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡಿಸಲಾಗಿದೆ. ಈ ವರದಿಯ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ ಐ ಟಿ) ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಈ ಕುರಿತು ವಿವರ ನೀಡಿದರು.  ಶೇ. 40 ಲಂಚ ನೀಡಿರುವುದು ಯಾವುದಾದರೂ ಪ್ರಕರಣಗಳಲ್ಲಿ ದೃಢಪಟ್ಟಿದೆಯೇ ಎಂಬ ಪ್ರಶ್ನೆಗೆ ಪಾಟೀಲ ಅವರು ನೇರ ಉತ್ತರ ನೀಡದೆ ಇನ್ನಷ್ಟೇ ಅಧ್ಯಯನ ಮಾಡಬೇಕಿದೆ ಎಂದರು.

ಆಯೋಗವು ಮೂರು ಲಕ್ಷ ಕಾಮಗಾರಿಗಳಲ್ಲಿ 1729 ಕಾಮಗಾರಿಗಳನ್ನು ಸ್ಯಾಂಪಲ್‌ ಆಗಿ ತೆಗೆದುಕೊಂಡು ಪರಿಶೀಲನೆ ನಡೆಸಿದೆ. ಕೆಲವು ಪ್ರಕರಣಗಳಲ್ಲಿ ವ್ಯತ್ಯಾಸಗಳಿವೆ. ಕೆಲವು ಕಾಮಗಾರಿಗಳಲ್ಲಿ ಹೆಚ್ಚು ಹಣ ಪಾವತಿಯಾಗಿದೆ. ಕೆಲವು ಕಾಮಗಾರಿಗಳ ಬಗ್ಗೆ ಸಂಶಯವಿದೆ. ಟೆಂಡರ್‌ ಪ್ರಕ್ರಿಯೆಯಲ್ಲಿ ಲೋಪವಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಲಾಯಿತು. ಎಸ್ ಐ ಟಿ ಯಲ್ಲಿ ಪರಿಗಣಿತರು, ಅಧಿಕಾರಿಗಳು ಇರಲಿದ್ದಾರೆ ಎಂದು ಸಚಿವ ಪಾಟೀಲ ತಿಳಿಸಿದರು.

More articles

Latest article