ಬಿಜೆಪಿ ಪರಿವಾರ ಗಾಂಧಿ ಹಿಂದುತ್ವ ಮತ್ತು  ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ

Most read

ಬೆಳಗಾವಿ : ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯ  ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಗಾಂಧೀಜಿ ಅವರ ಹಿಂದುತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.

ಮಹಾತ್ಮಾ ಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ. ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಾ ಗಾಂಧಿ. ಆ ದಿನದಂದು ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು. 

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

More articles

Latest article