ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ ಜೂನ್ ಆರರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್ನಲ್ಲಿ ಆದೇಶಿಸಲಾಗಿದೆ.
ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲೆಯಲ್ಲಿ ಕೋಮು ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆರ್ ಎಸ್ ಎಸ್ ಮುಖಮಡ ಕಲ್ಲಡ್ಕ ಪ್ರಬಾಕರ ಭಟ್ಟ ವಿರುದ್ಧ ಎಫ್ ಐ ಆರ್ ದಾಖಲಿಸದ ಬೆನ್ನಲ್ಲೇ ಪುತ್ತಿಲ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ.