ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಜೆಪಿ ನಡ್ಡಾ ಅವರನ್ನು ಇಂದು ರಾಜ್ಯಸಭಾ ಸದನದ ನಾಯಕರಾಗಿ ನೇಮಕಗೊಂಡಿದ್ದಾರೆ.
ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯ ನೂತನ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ, ನಂತರ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕರಿಸಿದ ನಂತರ ನಡ್ಡಾ ತಮ್ಮ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಈಗ ನಡ್ಡಾ ಬಿಜೆಪಿಯ ಪ್ರಮುಖ ಸಾಂಸ್ಥಿಕ ನಾಯಕರಾಗಿದ್ದಾರೆ.
ಈ ಮಧ್ಯೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಟಿಎಂಸಿ ಸಂಸದ ಸೌಗತ ರಾಯ್ ಸೇರಿದಂತೆ ವಿರೋಧ ಪಕ್ಷಗಳ ಮೈತ್ರಿಕೂಟದ ನಾಯಕರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.