ಬೈಕ್ ಸ್ಟಂಟ್ ರೀಲ್ಸ್‌ ಮಾಡಲು ಹೋಗಿ ಬಿಜೆಪಿ ಮುಖಂಡನ ಪುತ್ರ ಸಾವು

ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ(15) ಮೃತ

ಹುಬ್ಬಳ್ಳಿ :  ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ(15) ಮೃತಟ್ಟಿದ್ದಾನೆ.
ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿಯಾಗಿರುವ ನಮೀಷ ಸಂಗಳದ, ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ.  ಯುಗಾದಿ ಹಬ್ಬಕ್ಕೆಂದು ಹುಬ್ಬಳ್ಳಿಗೆ ಬಂದಿದ್ದು, ಈ ವೇಳೆ ಅಪಯಕಾರಿ ರೀಲ್ಸ್ ಮಾಡಲು ಹೋಗಿ ದುರಂತ ಸಾವು ಕಂಡಿದ್ದಾನೆ. ಇದರಿಂದ ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಛಾಯೆ ಆವರಿಸಿದೆ.

ನಮೀಷ ಸಂಗಳದ ರೀಲ್ಸ್ ಮಾಡಲೆಂದು ಗೆಳೆಯರೊಂದಿಗೆ ಸೇಜವಾಡಕ್ಕರ್ ಪ್ಲಾಟ್‌‌ಗೆ ತೆರಳಿದ್ದರು. ವೇಗವಾಗಿ ವಾಹನ ಚಲಾಯಿಸುವ ರೀಲ್ಸ್ ಮಾಡಲು ಪ್ಲ್ಯಾನ್ ಮಾಡಿದ್ದರು. ಅದರಂತೆ ಓರ್ವ ಅಪ್ರಾಪ್ತ ಬಾಲಕ ಆಡಿ ಕಾರು ಓಡಿಸುತ್ತಿದ್ದರೆ, ಇನ್ನೊಂದೆಡೆ ಮೃತ ನಮೀಷ ಸಂಗಳದ ಬೈಕ್​ ನಲ್ಲಿದ್ದು, ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಮೀಷ ಸಂಗಳದ ಇದ್ದ ಬೈಕ್​​​ಗೆ ಗುದ್ದಿದೆ ಪರಿಣಾಮ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ ಸಾವನ್ನಪ್ಪಿದ್ದಾನೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿರುವ ಅಪ್ತಾಪ್ತ‌ ಬಾಲಕನನ್ನು‌ ವಿಚಾರಣೆಗೊಳಪಡಿಸಿದ್ದಾರೆ.

More articles

Latest article

Most read