ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ; ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ, ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ಅನ್ನು ತಿರಸ್ಕರಿಸಿ, ಪ್ರಕರಣ ಮರು ತನಿಖೆ ನಡೆಸುವಂತೆ ಸಿಐಡಿ ಎಸ್‌ಐಟಿಗೆ ಜನ ಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.

ಜೆಡಿಎಸ್‌ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಪತ್ನಿ ಮಂಜುಳಾ ವಿರುದ್ಧ ಹನಿಟ್ರ್ಯಾಪ್‌ ಮಾಡಲು ಸಂಚು ರೂಪಿಸಿದ್ದ ಆರೋಪ ಸಂಬಂಧ ಶಾಸಕ ಮುನಿರತ್ನ ವಿರುದ್ಧದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು.

ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಸಲ್ಲಿಸಿದ್ದ ದೂರಿನ ತನಿಖೆ ಪೂರ್ಣಗೊಳಿಸಿದ ಎಸ್‌ಐಟಿ ಅಧಿಕಾರಿಗಳು “ಸಾಕ್ಷಿಗಳ ಕೊರತೆ” ಇದೆಯೆಂದು, ಉಲ್ಲೇಖಿಸಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಎಸ್ಐಟಿ ಯ ಈ ವರದಿಯನ್ನು ಪ್ರಶ್ನಿಸಿ ನಾರಾಯಣಸ್ವಾಮಿ ಮರು ಅರ್ಜಿ ಸಲ್ಲಿಸಿದ್ದರು. ಲಗ್ಗೆರೆ ನಾರಾಯಣಸ್ವಾಮಿ ಸಲ್ಲಿಸಿರುವ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯವು ‘ಬಿ’ ರಿಪೋರ್ಟ್‌ ರದ್ದುಗೊಳಿಸಿ ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಮತ್ತು ಕೋರ್ಟ್ ವಿಚಾರಣೆಯನ್ನು ಮಾರ್ಚ್‌ 30 ಕ್ಕೆ ಮುಂದೂಡಿದೆ.

More articles

Latest article

Most read