ಜಿಬಿಎ ಸಭೆಗೆ ಗೈರು ಹಾಜರಾದ ಬಿಜೆಪಿ ಶಾಸಕರು ಬೆಂಗಳೂರು ಅಭಿವೃದ್ಧಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ಶಾಸಕರು ಅಭಿವೃದ್ಧಿಯ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಬಿಎ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಅವಕಾಶಗಳಿದ್ದರೂ ಗೈರಾಗುವ ಮೂಲಕ ಬಿಜೆಪಿ ಶಾಸಕರು ಬೆಂಗಳೂರು ಅಭಿವೃದ್ಧಿಯ ವಿರೋಧಿಗಳು ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಶಾಸಕರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಜಿಬಿಎ ವಿರೋಧಿಸುವ ಮೂಲಕ ಆಡಳಿತ ವಿಕೇಂದ್ರೀಕರಣಕ್ಕೆ ತಮ್ಮ ವಿರೋಧ ಇದೆ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಮರಳಿ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

More articles

Latest article

Most read