ಉಕ್ಕಿನ ಮನುಷ್ಯನ ನೆನಪು ಮಾಡಿಕೊಂಡ ಬಿಜೆಪಿ

Most read

ಬೆಂಗಳೂರು: ದೇಶ ಕಂಡ ಧೀಮಂತ ನಾಯಕ, ಮೊತ್ತ ಮೊದಲ ಗೃಹ ಸಚಿವ ‘ಉಕ್ಕಿನ ಮನುಷ್ಯ’ ಎಂದೇ ಖ್ಯಾತರಾಗಿದ್ದ ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಇಂದು ಬೆಂಗಳುರಿನಲ್ಲಿ ಐಕ್ಯತಾ ಓಟವನ್ನು ಹಮ್ಮಿಕೊಂಡಿತ್ತು.
ಐಕ್ಯತಾ ಓಟವು ಬೆಳಿಗ್ಗೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಈ ದೇಶದ ಐಕ್ಯತೆಗೆ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರ ಮತ್ತು ದೇಶದ ಅಖಂಡತೆಗೂ ವಿಶಿಷ್ಟ ಕೊಡುಗೆ ನೀಡಿದ್ದಾರೆ. ದೇಶದ ಏಕತೆ, ಅಖಂಡತೆ ಬಗ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಇದ್ದ ಕನಸು ಇಂದು ನನಸಾಗುತ್ತಿದೆ ಎಂದರು.
ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಪಟೇಲರು ಕರ್ನಾಟಕದಲ್ಲೂ ನಿಜಾಮ್ ಆಡಳಿತವನ್ನು ರದ್ದು ಮಾಡಿ, ದಂಗೆ, ಅತ್ಯಾಚಾರ, ಅನಾಚಾರಗಳನ್ನು ನಿಲ್ಲಿಸಿ ಭಾರತವನ್ನು ಒಂದುಗೂಡಿಸಿದರು. ಇಂತಹ ಮಹಾನ್‌ ಪುರುಷನ 150 ವರ್ಷದ ಜನ್ಮದಿನವನ್ನು ನಾವು ಆಚರಿಸುತ್ತಿದ್ದೇವೆ ಎಂದು ಹೇಳಿದರು. ಶಾಸಕರಾದ ಕೃಷ್ಣಪ್ಪ, ರವಿ ಸುಬ್ರಹ್ಮಣ್ಯ, ರಘು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್, ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು

More articles

Latest article