ಬೆಂಗಳೂರು : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಾಮಚಂದ್ರ ಗೌಡ ಅವರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ರಾಮಚಂದ್ರಗೌಡರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಒಡನಾಟವನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ರಾಮಚಂದ್ರ ಗೌಡರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ನಾನು ನನ್ನ ಮತ್ತೊಬ್ಬ ಸಹೋದರನನ್ನು ಕಳೆದುಕೊಂಡಂತಾಗಿದೆ. ಜನಸಂಘದ ದಿನಗಳಿಂದ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ದಿನಗಳು, ಹಗಲಿರುಳು ಶ್ರಮಿಸಿ ರಾಜ್ಯಾದ್ಯಂತ ಪಕ್ಷ ಕಟ್ಟಿದ ನೆನಪುಗಳು ಕಣ್ಣಮುಂದೆ ಸುಳಿಯುತ್ತಿವೆ. ನನ್ನ ಸಂಪುಟದ ಸಹೋದ್ಯೋಗಿಯಾಗಿ ಅವರ ಆಡಳಿತ ಚಾತುರ್ಯ ಹಾಗೂ ಬದ್ಧತೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಬಿಜೆಪಿ ಹಿರಿಯ ಮುಖಂಡ ರಾಮಚಂದ್ರಗೌಡ ನಿಧನ