BJP ವರಿಷ್ಠರ ಭೇಟಿಯಾದ ಸುಮಲತಾ; ಮಂಡ್ಯ ಸಂಸದರು ಕಾಂಗ್ರೆಸ್‌ಗೆ ಹೋಗ್ತಾರೆ ಎಂಬ ಅಚ್ಚರಿ ಹೇಳಿಕೆ ಕೊಟ್ಟ ಜಿಟಿಡಿ!

ಮಂಡ್ಯ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿದ ಸಂಸದೆ ಸುಮಲತಾ ಅಂಬರೀಶ್ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಆದರೆ ಮಾಜಿ ಸಚಿವ ಜಿ.ಟಿ.ದೇವೇಗೌಡರು ಅವರು ಸುಮಲತಾ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.

ಹೌದು, ಮಂಡ್ಯ ಟಿಕೆಟ್ ಕೈ ತಪ್ಪವ ಆತಂಕದಲ್ಲಿರುವ ಸುಮಲತಾ ಇಂದು ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಮೂಲಕ ದೆಹಲಿ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಲೋಕಸಮರ ಎದುರಿಸಲು ಮುಂದಾಗಿವೆ. ಮೈತ್ರಿ ಭಾಗವಾಗಿ ಬಹುತೇಕ ಮಂಡ್ಯ ಜೆಡಿಎಸ್ ಪಾಲಾಗೋ ಸಾಧ್ಯತೆಗಳಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಶಾಸಕ ಜಿಟಿ ದೇವೇಗೌಡ, ಸುಮಲತಾ ಅಂಬರಿಶ್ ಪಕ್ಷೇತರರಾಗಿ ಸ್ಪರ್ಧಿಸಿ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ಅವರ ಗೆಲುವಿಗೆ ಶ್ರಮಿಸಿದ ನಾರಾಯಣಗೌಡ ಈಗ ಸಿದ್ದರಾಮಯ್ಯ ಮನೆಯಲ್ಲಿ ಕೂತಿದ್ದಾರೆ. ಹಾಗಾಗಿ ಸುಮಲತಾ ಕಾಂಗ್ರೆಸ್​ಗೆ ಹೋಗಬಹುದು ಎಂದು ಹೇಳಿದ್ದಾರೆ.

ಮಂಡ್ಯದಿಂದ ಸುಮಲತಾ ಬಿಜೆಪಿ ಅಭ್ಯರ್ಥಿಯಾದರೆ ಸ್ವಾಗತ. ಗೌಡರ ಕುಟುಂಬದಿಂದ ಇಬ್ಬರು ಅಭ್ಯರ್ಥಿಗಳು ಇದ್ದಾರೆ ಅವರು ಸಹ ಅಭ್ಯರ್ಥಿಗಳಾಗಬಹುದು ಎಂದು ಹೇಳಿದ್ದಾರೆ.

ತುಮಕೂರು, ಹಾಸನ, ಮಂಡ್ಯ, ಮೈಸೂರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಉತ್ತರದ ಪೈಕಿ ಆರು ಕ್ಷೇತ್ರಗಳನ್ನು ಕೇಳಿದ್ದೇವೆ. ಬಿಜೆಪಿ ಜೊತೆಗೂಡಿ ನಾವು 28 ಲೋಕಸಭೆ ಕ್ಷೇತ್ರ ಗೆಲ್ಲುತ್ತೇವೆ ಎಂದು ಜಿಟಿ ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದರು.

More articles

Latest article

Most read