ಹಾಸನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದು, ಇಡಿ ಮೂಲಕ ಅವರನ್ನು ಬೆದರಿಸಲಾಗುತ್ತಿದೆ. ಹಾಗೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಕುರುಕುಳ ನೀಡುತ್ತಿದೆ. ಇದು ಕರ್ನಾಟಕದ ಕಡು ಬಡವರ ಮೇಲೆ ಮಾಡುತ್ತಿರುವ ದಾಳಿಯಾಗಿದೆ ಎಂದು ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ರಣ್ ದೀಪ್ ಸಿಂಗ್ ಸುರ್ಜೇವಾವಾ ವಾಗ್ದಾಳಿ ನಡೆಸಿದ್ದಾರೆ.
ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕರ್ನಾಟಕ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಯಶಸ್ಸನ್ನು ಸಹಿಸದೆ ಬಿಜಪೆಇ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದೆ. ಸುರ್ಜೇವಾಲ ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಗೃಹಲಕ್ಮೀ ಯೋಜನೆ ಬಂದ್ ಮಾಡಲು ಬಿಜೆಪಿ ಕುತಂತ್ರ ನಡೆಸಿದೆ. ಗ್ಯಾರಂಟಿಗಳ ಮೇಲೆ ಬಿಜೆಪಿ ಕಣ್ಣು ಹಾಕಿದೆ. ನಮ್ಮ ಗ್ಯಾರಂಟಿಗಳನ್ನು ಮುಟ್ಟಲು ಯಾರಿಗೂ ಸಧ್ಯ ಇಲ್ಲ. ನಾವು ಸಂವಿಧಾನದ ರಕ್ಷಣೆ ಮಾಡ್ತೇವೆ. ಕೇಂದ್ರದಲ್ಲಿರುವ ಬಿಜೆಪಿ ಬಂಡವಾಳ ಶಾಹಿಗಳ ಪರ ಇದೆ ಎಂದರು.
ಈ ಬಂಡೆ ಶಿವಕುಮಾರ್ ಸಿದ್ದರಾಮಯ್ಯ ಜೊತೆಗೆ ಇರುತ್ತಾನೆ. ಸಾಯುವವರೆಗೂ ಸಿದ್ದರಾಮಯ್ಯ ಜೊತೆ ನಾನು ಇರ್ತೇನೆ. ಕಾಂಗ್ರೆಸ್ ಪಕ್ಷದ ಶಕ್ತಿ ದೇಶದ ಶಕ್ತಿ. 5 ಗ್ಯಾರಂಟಿಗಳು ಫರ್ಮನೆಂಟು. 2028ರಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಕಮಲ ಕೆರೆಯಲ್ಲಿ ಇದ್ದರೆ ಚಂದ. ದಾನ-ಧರ್ಮದ ಕೈ ಅಧಿಕಾರದಲ್ಲಿ ಇದ್ದರೆ ಚೆಂದ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಮುಂದೊಂದು ದಿನ ಹಾಸನದ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ತಾಯಂದಿರ ಸ್ವಾಭಿಮಾನ ಉಳಿಸಲು ಸ್ವಾಭಿಮಾನಿ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದರು.