ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ದೆಹಲಿ ಏಮ್ಸ್‌ ಹೇಳಿದ್ದೇನು?

ಭಾರತರತ್ನ ಎಲ್.ಕೆ ಅಡ್ವಾಣಿ (96) ಆರೋಗ್ಯದಲ್ಲಿ ಏರುಪೇರಾಗಿದ್ದು, ರಾತ್ರಿ ಅವರನ್ನು ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರಿಗೆ ದೆಹಲಿ ಏಮ್ಸ್‌ ನ ವಿಶೇಷ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಮುಂಜಾನೆ 4 ಗಂಟೆ ಸುಮಾರಿಗೆ ಅಡ್ವಾಣಿ ಆರೋಗ್ಯದ ಕುರಿತು ಏಮ್ಸ್ ಮಾಹಿತಿ ನೀಡಿದ್ದು, ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ನಿಗಾದಲ್ಲಿರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.  

ಅಡ್ವಾಣಿ ಅವರನ್ನು ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಅನಾರೋಗ್ಯ ಸಮಸ್ಯೆಗಳ ಕಾರಣದಿಂದ ಅವರನ್ನು ಪರಿಣತರ ವೈದ್ಯರು ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆಗೆ ಒಳಪಡಿಸಿದೆ. ಎಲ್‌ಕೆ ಅಡ್ವಾಣಿ ಅವರಿಗೆ ಕಾಲಕಾಲಕ್ಕೆ ಮನೆಯಲ್ಲಿ ತಪಾಸಣೆ ಮಾಡಲಾಗುತ್ತಿತ್ತು, ಆದರೆ ಕೆಲವು ಗಂಟೆಗಳ ಹಿಂದೆ ಅವರ ಆರೋಗ್ಯ ಏರುಪೇರು ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅಡ್ವಾಣಿ‌ ಮೂತ್ರಪಿಂಡ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು, ಯುರಾಲಜಿ ವಿಭಾಗದ ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ವರ್ಷ ಮಾರ್ಚ್ 30 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಲ್.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

More articles

Latest article

Most read