ಪಂಚಮಸಾಲಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದ್ದು ಬಿಜೆಪಿ ಕಾರ್ಯಕರ್ತರು: ಶಾಸಕ ಕಾಶಪ್ಪನವರ್ ಆರೋಪ

ಬೆಳಗಾವಿ: 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಪಂಚಮಸಾಲಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್‌ನವರು ಎಂದು ಪಂಚಮಸಾಲಿ ಸಮುದಾಯದ ಮುಖಂಡ ಶಾಸಕ ವಿಜಯಾನಂದ ಕಾಶಪ್ಪನವರ್ ಗಂಭೀರ ಆರೋಪ ಮಾಡಿದ್ದಾರೆ.
ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ ಅದೇ ಸಮುದಾಯದ ಶಾಸಕ ವಿಜಯಾನಂದ ಕಾಶಪ್ಪನವರ್, ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್‌ನವರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ನಮ್ಮ ಪಂಚಮಸಾಲಿ ಸಮುದಾಯದ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್‌ನವರು. ಪೊಲೀಸರ ಮೇಲೆ ಕಲ್ಲು ತೂರಲು ಪ್ರೇರೇಪಣೆ ನೀಡಿದ್ದು ಸ್ವಾಮೀಜಿಗಳು ಎಂದು ಆಪಾದಿಸಿದರು.

ಸ್ವಾಮೀಜಿಗೆ ಗೌರವ ಕೊಡುತ್ತೇನೆ. 712 ಕಿ.ಮೀ ಹೋರಾಟ ಮಾಡಿದ್ದೇವೆ. ಆ ಸಂದರ್ಭದಲ್ಲಿ ಒಂದೇ ಒಂದು ಅಹಿತಕರ ಘಟನೆ ನಡೆಯಲಿಲ್ಲ. ಗಲಾಟೆ ನಡೆಯಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ಗಲಾಟೆ ಮಾಡಿಸಿದ್ದಾರೆ. ಗಾಯಾಳುಗಳನ್ನು ನೋಡಿಕೊಳ್ಳುವವರು ಯಾರು? ಸ್ವಾಮೀಜಿ ನೋಡಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದರು.

ಈ ಮೀಸಲಾತಿಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ ಅದನ್ನು ತೆಗೆಯಬೇಕು. ಸ್ವಾಮೀಜಿ ತೀರ್ಮಾನ ಒಂದೇ ಅಲ್ಲಾ ಸಮಾಜ ಇದೆ. ನಾವು 12 ಮಂದಿ ಶಾಸಕರು ಇದ್ದೇವೆ. ಬಿಜೆಪಿ ಪಾರ್ಟಿಯ ವೇದಿಕೆಗೆ ಹೋಗಿ ಭಾಷಣ ಮಾಡುತ್ತಾರೆ. ನಾವು ಮೀಸಲಾತಿ ಕೊಡಿಸುತ್ತೇವೆ ಎಂದಿದ್ದಾರೆ. ಇದು ಸಾಧ್ಯವೇ ಎಂದು ಕಿಡಿ ಕಾರಿದರು.

More articles

Latest article

Most read