ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಚಿವ ಸ್ಥಾನದಿಂದ ವಂಚಿತರಾಗಿ ಮುನಿಸಿಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಬುಧವಾರ ರಾತ್ರಿ ಮುನಿಸು ಮರೆತು ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸುಮಾರು ಒಂದುವರೆ ಗಂಟೆ ಹರಿಪ್ರಸಾದ್ ಜೊತೆ ಚ ಸಿದ್ದರಾಮಯ್ಯ ಚರ್ಚೆ ನಡೆಸಿದರು.
ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿದ ಸಿದ್ಧರಾಮಯ್ಯ ಅವರಹ ಬಿ.ಕೆ.ಹರಿಪ್ರಸಾದ್ ಅವರ ಜೊತೆ ಸದ್ಯದ ರಾಜಕೀಯ ಬೆಳವಣಿಗೆ ಕುರಿತು ಗಂಭೀರ ಚರ್ಚೆ ನಡೆಸಿದರು.
ಸಂಪುಟಕ್ಕೆ ಬಿ ಕೆ ಹರಿ ಪ್ರಸಾದ್ ಅವರನ್ನು ಸೇರಿಸಿಕೊಳ್ಳಲು ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಆಗಸ್ಟ್ ಕೊನೆಯ ವಾರದಲ್ಲಿ ಸಂಪುಟಕ್ಕೆ ಬಿ. ಕೆ.ಹರಿಪ್ರಸಾದ್ ಸೇರ್ಪಡೆಯಾಗುವ ಸಾಧ್ಯತೆ ಇದೆ.