ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಹರಿಪ್ರಸಾದ್ ಅಧಿಕಾರ ಸ್ವೀಕಾರ : ಲಕ್ಷ ಜನ ಭಾಗವಹಿಸುವ ನಿರೀಕ್ಷೆ

ಬೆಂಗಳೂರು :  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರು ಇಂದು ಬೆಳಗ್ಗೆ  10-30 ಗಂಟೆಗೆ ಅರಮನೆ ಮೈದಾನದ ತ್ರಿಪುರವಾಸಿನಿ ಆವರಣದಲ್ಲಿ ಬೃಹತ್ ಸಮಾರಂಭದಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ , ಸಚಿವರುಗಳು, ಸಂಸದರು, ಶಾಸಕರು, ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಕಾರ್ಯಾಧ್ಯಕ್ಷರು ಭಾಗವಹಿಸಲಿದ್ದಾರೆ.

ಒಂದು ಲಕ್ಷ ಜನ ಭಾಗಿ ನಿರೀಕ್ಷೆ:
ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಗಳ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಶನಿವಾರ ಮಾತನಾಡಿ, ಬೆಂಗಳೂರು ನಗರದ ಅರಮನೆ ಮೈದಾನದ ತ್ರಿಪುರ ವಾಹಿನಿಯಲ್ಲಿ ನಡೆಯುವ ನೂತನ ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ಹಸ್ತಾಂತರ ಸಮಾರಂಭಕ್ಕೆ 1 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 70 ಕಡೆ ಆಹಾರ ವಿತರಣಾ ಕೌಂಟರ್  ತೆರೆಯಲಾಗಿದೆ. ಬೆಳಿಗ್ಗೆ 8 ಗಂಟೆಯಿಂದಲೇ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ಊಟದ ವ್ಯವಸ್ಥೆಯಿದೆ. ಕುಡಿಯುವ ನೀರು, ಮಜ್ಜಿಗೆ ವ್ಯವಸ್ಥೆಯೂ ಇರಲಿದೆ ಎಂದು ಹೇಳಿದರು.

ನೀಟ್ ಪರೀಕ್ಷೆ ಇರುವ ಕಾರಣಕ್ಕೆ ಕಾರ್ಯಕರ್ತರು ಜನರ ಜೊತೆ ಸಹಕರಿಸಬೇಕು. ಕಾರ್ಯಕ್ರಮಕ್ಕೆ ಬರಲಾಗದಿದ್ದರೂ ಪರವಾಗಿಲ್ಲ ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಪೊಲೀಸರ ಜೊತೆಗೆ ಚರ್ಚೆ ಮಾಡಿ ಸಂಚಾರ ದಟ್ಟಣೆ ತಪ್ಪಿಸಲು ಕಳೆದ ಮೂರು ದಿನಗಳಿಂದ ರೂಟ್ ಮ್ಯಾಪ್ ಸಿದ್ದಪಡಿಸಲಾಗಿದೆ. ಎಂಟು ಸಮಿತಿಗಳನ್ನು ರಚಿಸಲಾಗಿದ್ದು, ಕಮಿಟಿ ಸದಸ್ಯರು ಎಲ್ಲವನ್ನ ನಿರ್ವಹಣೆ ಮಾಡುತ್ತಾರೆ. ಕಾರ್ಯಕರ್ತರೇ ಎಲ್ಲಾ ಜವಾಬ್ದಾರಿ ಹೊತ್ತಿದ್ದಾರೆ.

ಸುಮಾರು 350 ಜನ ಗಣ್ಯರಿಗೆ ವೇದಿಕೆ ಮೇಲೆ ವ್ಯವಸ್ಥೆ ಕಲ್ಪಿಸಲಾಗಿದೆ. 200 ಜನ ಆಸೀನರಾಗುವ ಇನ್ನೊಂದು ವೇದಿಕೆಯೂ ಇದೆ. 4000 ಬ್ಲಾಕ್ ಕಾಂಗ್ರೆಸ್ ನ ಪ್ರತಿನಿಧಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. 1200 ಬಸ್ ಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಯಾರು ಯಾರು ಎಲ್ಲೆಲ್ಲಿ ಬರಬೇಕು ಎಂದು ಮೊದಲೇ ಎಲ್ಲಾ ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮಾರಂಭ ನಡೆಯುವ ಸ್ಥಳದಲ್ಲಿ 6 ಆ್ಯಂಬುಲೆನ್ಸ್ ಗಳು ಇರಲಿವೆ.

ಜನರಿಗೆ ತೊಂದರೆ ಆಗಬಾರದು ಎಂದು ಭಾನುವಾರದಂದು ಈ ಜವಾಬ್ದಾರಿ ಹಸ್ತಾಂತರ ಮಾಡಲಾಗುತ್ತಿದೆ. ಸಂಚಾರ ದಟ್ಟಣೆ ಕಡಿಮೆ ಇರಲಿದೆ ಎಂದು ಈ ತೀರ್ಮಾನ ಮಾಡಲಾಗಿದೆ. ಹರಿಪ್ರಸಾದ್ ಅವರು ಡಿ.ಕೆ.ಶಿವಕುಮಾರ್ ಅವರಂತೆ ಸರಳವಾಗಿ ಭಾರತ್ ಜೋಡೋ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವೆ ಎಂದು ಹೇಳಿದ್ದರು. ಆದರೆ ಪಕ್ಷದ ಕಾರ್ಯಕರ್ತರ ಹಬ್ಬ ಅದಕ್ಕಾಗಿ ಅರಮನೆ ಮೈದಾನದಲ್ಲಿ ದೊಡ್ಡ ಪ್ರಮಾಣದಲ್ಲಿ ಮಾಡಲಾಗುತ್ತಿದೆ.

ಮುಖ್ಯಮಂತ್ರಿ ಹಾಗು ನಿಕಟಪೂರ್ವ ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ.ಶಿವಕುಮಾರ್ ಅವರು ಪಕ್ಷದ ಧ್ವಜವನ್ನು ನೂತನ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರಿಗೆ ಹಸ್ತಾಂತರ ಮಾಡಲಿದ್ದಾರೆ ಎಂದುಹೇಳಿದರು.

More articles

Latest article

Most read