ಶಾಂತಿನಗರ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಸಿಬ್ಬಂದಿ ಸಾವಿಗೆ ಶರಣು

ಬೆಂಗಳೂರು: ಶಾಂತಿನಗರದ ಬಸ್ ನಿಲ್ದಾಣದ ಮೂರನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಓರ್ವ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಜಾರಿ ನಿರ್ದೇಶನಾಲಯದ (ಇಡಿ) ಕಚೇರಿ ಪಕ್ಕದಲ್ಲಿರುವ ಬಿಎಂಟಿಸಿ ಕಚೇರಿಯಲ್ಲಿ ಈ ಘಟನೆ ನಡೆದಿದೆ.

ನಿನ್ನೆ ಬೆಳಗ್ಗೆ ಸೆಕ್ಯುರಿಟಿ ಗಾರ್ಡ್ ಬಳಿ ರೆಕಾರ್ಡ್ಸ್ ರೂಮ್ ಬೀಗ ಕೇಳಿ ಪಡೆದಿದ್ದ ಮಹೇಶ್ ನಂತರ ಅಲ್ಲೇ ಸಾವಿಗೀಡಾಗಿದ್ದಾನೆ.

ನಿನ್ನೆ ಬೆಳಗ್ಗೆಯಿಂದ ರೆಕಾರ್ಡ್ಸ್ ರೂಮ್ ನಲ್ಲಿ ಓಡಾಡಿದ್ದ ಮಹೇಶ್ ನಿನ್ನೆ ಸಂಜೆ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.

ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರ ಭೇಟಿದ್ದು ಪರಿಶೀಲನೆ ನಡೆಸಿದ್ದಾರೆ. ಮಹೇಶ್ ಆತ್ಮಹತ್ಯೆ ಬಗ್ಗೆ ಕುಟುಂಬ ಸದಸ್ಯರಿಗೆ ಪೊಲೀಸರ ಮಾಹಿತಿ ನೀಡಲಾಗಿದೆ.

More articles

Latest article

Most read