Tuesday, September 17, 2024

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ : ಹೈಕೋರ್ಟ್ ಆದೇಶ

Most read

ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್​ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಅಲ್ಲದೇ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ಹೈಕೋರ್ಟ್​ ವಿಭಾಗೀಯ ಅನುಮತಿ ನೀಡಿದೆ.

.​2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಇದನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ವಾದ ಆಲಿಸಿಸ ಕೋರ್ಟ್ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

More articles

Latest article