ದೋಣಿ ಮುಗುಚಿ ನೀರು ಪಾಲಾದ ಮೂವರು ಮೀನುಗಾರರು

Most read

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್ ಖಾರ್ವಿ (36) ನೀರುಪಾಲಾದ ಮೀನುಗಾರರು.

ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ಅಲೆಗಳ ಅಬ್ಬರ ಹೆಚ್ಚಾಗಿದ್ದರಿಂದ ಇವರು ಮರಳುತ್ತಿದ್ದರು .ಆಗ ದೋಣಿ ಮಗುಚಿದೆ. ದೋಣಿ ಮುಗಿಚಿದ ರಭಸಕ್ಕೆ ಓರ್ವ ಮೀನುಗಾರ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರೂ ಸಹ ನೀರುಪಾಲಾಗಿದ್ದಾರೆ. ಇವರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article