ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರಲ್ಲಿ ಓರ್ವನ ಶವ ಪತ್ತೆ, ಇನ್ನಿಬ್ಬರಿಗೆ ಶೋಧ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಇದೀಗ ಓರ್ವನ ಮೃತದೇಹ ಸಿಕ್ಕಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ.

ರಾಜ (22) ಹಾಗೂ ಅಜ್ಜಪ್ಪ (26) ನಾಪತ್ತೆಯಾಗಿರುವವರು. ಮಡಿವಾಳರ ಯಮನೂರಪ್ಪ (20) ಎಂಬವರ ಮೃತದೇಹ ಪತ್ತೆಯಾಗಿದೆ. ಮೂವರು ನಿನ್ನೆ ಮಧ್ಯಾಹ್ನ ಮೀನು ಹಿಡಿಯಲು ತುಂಗಭದ್ರಾ ನದಿಗೆ ತೆರಳಿದ್ದರು. ಆದರೆ ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹಲವು ಕಡೆ ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಹಿತಿ ಆಧರಿಸಿ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್‌ ತಂಡ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ನಾಪತ್ತೆಯಾದ ಮೂವರು ನದಿಗೆ ಇಳಿದಿದ್ದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಓರ್ವನ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಘಟನೆ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More articles

Latest article

Most read