ಬೆಂಗಳೂರು: ನಗರದ ಮುಖ್ಯಮಂತ್ರಿಗಳ ನಿವಾಸ ಹಾಗೂ ಕೋರಮಂಗಲದ ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆತ್ಮಾಹುತಿ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ನಿಷ್ಕ್ರಿಯ ದಳ ಮತ್ತು ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಆದರೂ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಮ್ ಸಲ್ಫರ್ ಅಧಾರಿತ ಐಇಡಿ ಬಳಸಿ ಬೆಂಗಳೂರಿನ ಪಾಸ್ಪೋರ್ಟ್ ಕಛೇರಿ ಮತ್ತು ಸಿಎಂ ಮನೆಗೆ ಬಾಂಬ್ ಇಟ್ಟು ಸ್ಫೋಟಿಸುತ್ತಿದ್ಧೇವೆ. ಸವುಕ್ಕು ಶಂಕರ್ ಮತ್ತು ಕಸಬ್ ನನ್ನು ಗಲ್ಲಿಗೇರಿಸಿದ್ದಕ್ಕೆ ಇದು ಪ್ರತಿಕಾರ ಎಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ತಪಾಸಣೆ ನಂತರ ಇದೊಂದು ಹುಸಿಕರೆ ಎಂದು ತಿಳಿಉ ಬಂದಿದೆ.
ಇತ್ತೀಚೆಗೆ ಬೆಂಗಳೂರಿನ ಆಚಾರ್ಯ ಕಾಲೇಜಿಗೂ ಬಾಂಬ್ ಇಟ್ಟಿರುವುದಾಗಿ ಕಾಲೇಜಿನ ಇ ಮೇಲ್ ಗೆ ಬೆದರಿಕೆ ಸಂದೇಶ ಬಂದಿತ್ತು. ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸ್ಫೋಟಿಸುವುದಾಗಿಯೂ ಜಿಲ್ಲಾಧಿಕಾರಿಗಳ ಅಧಿಕೃತ ಖಾತೆಗೆ ಮೇಲ್ ಬಂದಿತ್ತು.