ಜಹದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಿಂದ ದೊಡ್ಡ ಶಕ್ತಿ ಬಂದಿದೆ: ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸಂತಸ

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದು ಕಾಂಗ್ರೆಸ್ ಪ್ರಥಮಿಕ ಸದಸ್ಯತ್ವಕ್ಕೆ ಹಾಗೂ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ  ವಿಜಯೇಂದ್ರ ಹೇಳಿದ್ದಾರೆ.

ಇಂದು ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ರವರು ಕಾಂಗ್ರೆಸ್ ಪ್ರಾಥಮಿಕ ಸ್ಥಾನಕ್ಕೆ, ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೆಟ್ಟರ್ ಮರು ಸೇರ್ಪಡೆಗೆ ಅಮಿತ್ ಶಾ ಸಂತಸ ವ್ಯಕ್ತಪಡಿಸಿದ್ದು, ಅವರ ಮರು ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಂತಾಗಿದೆ ಎಂದು ಹೇಳಿದ್ದಾರೆ.

ಇಂದು ಅಮಿತ್ ಶಾ ಅವರ ಜತೆ ಕೂಡ ಚರ್ಚೆ ಮಾಡಿದ್ದಾರೆ. ಯಾವುದೇ ಅಪೇಕ್ಷೆ ಇಲ್ಲದೆ ಬಿಜೆಪಿಗೆ ಸೇರಿಕೊಂಡಿದ್ದಾರೆ. ಅಮಿತ್ ಶಾ, ನಡ್ಡಾ ಅವರು ಕೂಡ ಸಂತೋಷ್ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಶೆಟ್ಟರ್ ಪಕ್ಷಕ್ಕೆ ವಾಪಸ್ ಬರಬೇಕೆಂದು ಕಾರ್ಯಕರ್ತರ ಅಪೇಕ್ಷೆ ಇತ್ತು. ಜಗದೀಶ್ ಶೆಟ್ಟರ್ ಪಕ್ಷಕ್ಕೆ ಬಂದಿದ್ದರಿಂದ ದೊಡ್ಡ ಶಕ್ತಿ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

More articles

Latest article

Most read