Sunday, July 14, 2024

ತೆಲಂಗಾಣ ಬಿಆರ್‌ಎಸ್‌ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

Most read

ತೆಲಂಗಾಣದ ಬಿಆರ್‌ಎಸ್‌ ಪಕ್ಷದ ಶಾಸಕಿ ಲಾಸ್ಯ ನಂದಿತಾ ಅವರು ಇಂದು ರಸ್ತೆಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿದ್ದ 37 ವರ್ಷದ ನಂದಿತಾ ಅವರ ಕಾರು ನಿಯಂತ್ರಣ ತಪ್ಪಿ ಹೈದ್ರಾಬಾದ್ ರಸ್ತೆಯ ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ತಕ್ಷಣ‌ ಸ್ಥಳದಲ್ಲಿದ್ದವರು ಲಾಸ್ಯ ನಂದಿತಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇನ್ನು ಅವರ ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೆಲಾಂಗಣದ ರಾಜಕಾರಣದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿರುವ ಇವರು, ಈ ಹಿಂದೆ 2016 ರಿಂದ ಕವಾಡಿಗುಡದಿಂದ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದ್ದರು.

1986ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದ ಲಾಸ್ಯ ನಂದಿತಾ ಕಳೆದ ಒಂದು ದಶಕದಿಂದ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. 2023 ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

More articles

Latest article