ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ನೋಟಿಸ್ ನೀಡಿದ ಬರಲ್ಲ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು ಯಡಿಯೂರಪ್ಪ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ ಹಾಗೂ ಬಿ.ಎಸ್ ಯಡಿಯೂರಪ್ಪ ಅವರು ಬೆಂಗಳೂರಿನ ಗಂಗಾನಗರದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿ, ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದರು. ಇದನ್ನು ಈದಿನ.ಕಾಂ ಬಯಲಿಗೆಳೆದಿತ್ತು. ಇದೀಗಿ ಈ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿ ಬಿಸಿ ಮುಟ್ಟಿಸುತ್ತಿದ್ದಾರೆ.
ಈ ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಯಡಿಯೂರಪ್ಪ ಎ1 ಆರೋಪಿಯೂ ಆಗಿದ್ದು, ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬೆಳಗ್ಗೆ ಸಮನ್ಸ್ ನೀಡಿ ಶನಿವಾರ ಮಧ್ಯಾಹ್ನವೇ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿತ್ತು. ಈಗ ಬಿಎಸ್ ವೈ ವಿಚಾರಣೆಗೆ ಹಾಜರಾಗಿದ್ದಾರೆ.