ಇಡೀ ರಾಜ್ಯವೇ ಖುಷಿ ಪಡೋ ಸುದ್ದಿ ಎಂದು ಹೇಳಿ ವೈರಲ್ ಆಗಿದ್ದ ಆ್ಯಂಕರ್ ದಿವ್ಯ ವಸಂತ ಈಗ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ರಾಜ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಬೆಂಗಳೂರಿನ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಪ್ರಕರಣದಲ್ಲಿ ಸಿಲುಕಿರುವ ದಿವ್ಯ ಈ ಪೊಲೀಸರ ಅಥಿತಿಯಾಗಿದ್ದಾಳೆ.
ಕೇಸ್ ಬೆಳಕಿಗೆ ಬರುತ್ತಿದ್ದಂತೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.