ಅಲ್ಪಸಂಖ್ಯಾತರ ಕಲ್ಯಾಣ
• ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ.
• ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು 100 ಕೋಟಿ ರೂ.
• ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಗಾಗಿ 1 ಸಾವಿರ ಕೋಟಿ ರೂ. ಅನುದಾನ.
• ಮದರಸಾಗಳಲ್ಲಿನ ವಿದ್ಯಾರ್ಥಿಗಳು NIOS ಮೂಲಕ SSLC ಪರೀಕ್ಷೆ ಬರೆಯಲು ಸಿದ್ದತೆಗೆ ನೆರವು.
• ವಕ್ಪ್ ಸಂಸ್ಥೆ ಆಸ್ತಿಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ.
• ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು
2 ಕೋಟಿ ರೂ. ಅನುದಾನ.
• 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.
• ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗೆ ಪ್ರತಿ ಜೋಡಿಗೆ 50ಸಾವಿರ ರೂ. ಸಹಾಯಧನ.
• ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ ಹಳೆಯ ಗ್ರಂಥಾಲಯ 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣ
• ಅಲ್ಪಸಂಖ್ಯಾತ ಮಹಿಳೆಯರಿಗಾಗಿ 16 ಹೊಸ ಮಹಿಳಾ ಕಾಲೇಜುಗಳ ಸ್ಥಾಪನೆ.
• ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ
• ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಅನುದಾನ.
• ಜೈನ ಅರ್ಚಕರು, ಸಿಖ್ಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್
ಇಮಾಮ್ಗಳ ಮಾಸಿಕ ಗೌರವಧನ 6 ಸಾವಿರ ರೂ. ಗಳಿಗೆ ಹೆಚ್ಚಳ. ಸಿಖ್ಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳ ಮಾಸಿಕ ಗೌರವಧನ 5 ಸಾವಿರ ರೂ.ಗಳಿಗೆ ಹೆಚ್ಚಳ.
• ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಶೇ. 50 ಪ್ರವೇಶ ಶುಲ್ಕ ಮರುಪಾವತಿಗೆ ಕ್ರಮ.
• ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 30 ಲಕ್ಷ ರೂ.ಗಳಿಗೆ ಹೆಚ್ಚಳ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು
• ಅನ್ನಭಾಗ್ಯ ಯೋಜನೆಯಡಿ, ಸಹಾಯಧನದ ಬದಲಾಗಿ, 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಣೆ; 4.21 ಕೋಟಿ ಫಲಾನುಭವಿಗಳಿಗೆ ಅನುಕೂಲ.
• ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ 5 ಕೋಟಿ ರೂ.
• 80 ವರ್ಷ ಮೇಲ್ಪಟ್ಟ ಹಿರಿಯವರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ʻಅನ್ನ ಸುವಿಧಾʼ ಯೋಜನೆ 75 ವಯಸ್ಸು ಮೇಲ್ಪಟ್ಟ ಹಿರಿಯ ನಾಗರಿಕರು ಇರುವ ಮನೆಗಳಿಗೂ ವಿಸ್ತರಣೆ.
• ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್ ಗೆ 45 ರೂ. ಗಳಿಗೆ ಹೆಚ್ಚಳ.
ವಸತಿ
• ರಾಜೀವ್ ಗಾಂಧಿ ವಸತಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ AHP ಮನೆಗಳ ಫಲಾನುಭವಿಗಳಿಗೆ “Interest subvention” ಯೋಜನೆ ಜಾರಿ.
• ಕರ್ನಾಟಕ ಗೃಹ ಮಂಡಳಿಯಿಂದ ಸೂರ್ಯ ನಗರದ 4ನೇ ಹಂತದಲ್ಲಿ 16,140 ನಿವೇಶನಗಳ ಅಭಿವೃದ್ಧಿ ಹಾಗೂ ಹಂಚಿಕೆಗೆ ಕ್ರಮ.
• ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಯೋಜನೆಯಡಿ ಈಗಾಗಲೇ ಠೇವಣಿ ಪಾವತಿಸಿರುವ 12,153 ಫಲಾನುಭವಿಗಳಿಗೆ ವಂತಿಕೆಯ ಮೊತ್ತದಲ್ಲಿ ಒಂದು ಲಕ್ಷ ರೂ. ಕಡಿತ. ಸರ್ಕಾರದಿಂದ 121 ಕೋಟಿ ರೂ. ಭರಿಸಲು ಕ್ರಮ.
ಕಾರ್ಮಿಕ
• ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ 06ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳ ಸ್ಥಾಪನೆಗೆ 750 ಕೋಟಿ ರೂ. ವೆಚ್ಚ.
• ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ, ನೀಡುವ Ex-gratia ಮೊತ್ತ 1.5 ಲಕ್ಷ ರೂ.ಗೆ ಹೆಚ್ಚಳ ಮತ್ತು ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ನೀಡುವ ಪರಿಹಾರ ಮೊತ್ತ 8 ಲಕ್ಷ ರೂ.ಗೆ ಹೆಚ್ಚಳ.
• ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು 5 ಲಕ್ಷ ರೂ.ಗಳ ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿಂದ ಹೆಚ್ಚುವರಿಯಾಗಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಕ್ರಮ.
• ರಾಜ್ಯ ವಿಮಾ ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು 51 ಕೋಟಿ ರೂ. ಅನುದಾನ.
ಕೌಶಲ್ಯಾಭಿವೃದ್ಧಿ
• ಯುವನಿಧಿ ಫಲಾನುಭವಿ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ
• ರಾಜ್ಯದ ಯುವಕರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು CMKKY-2.0 ಜಾರಿ.
• ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ CMKKY-2.0 ಯೋಜನೆಯಡಿ ಜರ್ಮನ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ.
• ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ಆಯೋಜಿಸಲು ಕ್ರಮ.
• ಬೆಂಗಳೂರು, ಕಲಬುರಗಿ, ಮಂಗಳೂರು, ಮತ್ತು ಬೆಳಗಾವಿ ಕೆಜಿಟಿಟಿಐ ಕೇಂದ್ರಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ Industry-4.0ಗೆ ಅನುಗುಣವಾಗಿ ಹೊಸ ಪ್ರಯೋಗಾಲಯ ಸ್ಥಾಪನೆ.
• ʻನನ್ನ ವೃತ್ತಿ, ನನ್ನ ಆಯ್ಕೆʼ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ
• ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ India Skills-2026 ಸ್ಪರ್ಧೆ
• 2 ಸಾವಿರ ಅಭ್ಯರ್ಥಿಗಳಿಗೆ ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳ ಅಲ್ಪಾವಧಿ ತರಬೇತಿ ನೀಡಲು ಕ್ರಮ.
• ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸಲು ರಾಜ್ಯಮಟ್ಟದಲ್ಲಿ ʻಅಕ್ಕ ಕೋ-ಆಪರೇಟಿವ್ʼ ಸೊಸೈಟಿ ಸ್ಥಾಪನೆ.
• ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗಾಗಿ ʻವಾತ್ಸಲ್ಯ ಕೇಂದ್ರʼಗಳ ಸ್ಥಾಪನೆ.
• ರಾಜ್ಯದ 10 ನಗರಗಳಲ್ಲಿ ಪ್ರಾಯೋಗಿಕವಾಗಿ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆ
• ಪಿ.ಎಮ್. ಸ್ವ-ನಿಧಿ ಯೋಜನೆಯಡಿ ಸಾಲದ ಗರಿಷ್ಠ ಮಿತಿಯನ್ನು ತಲುಪಿರುವ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಣೆಗೆ ಪಡೆಯುವ ಒಂದು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ. 8 ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.
• 25 ಕೋಟಿ ರೂ. ವೆಚ್ಚದಲ್ಲಿ ಸೇಡಂ ಸರ್ಕಾರಿ ITI ಯನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಉನ್ನತೀಕರಣ.
• ಮಧುಗಿರಿ, ಇಂಡಿ, ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರು ತಾಲ್ಲೂಕುಗಳಲ್ಲಿ ನೂತನ GTTC ಸ್ಥಾಪನೆ.