ಬಜೆಟ್‌ ಹೈಲೈಟ್ಸ್‌ : ವಿಕ್ಟೋರಿಯಾ ಆಸ್ಪತ್ರೆಯನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರು ನಾಮಕರಣ

  • ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್‌ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
  • ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ನೀರಾವರಿ ಕಾಮಗಾರಿ 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು.
  • ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು.

    * ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟುಗಳನ್ನು ಬದಲಾಯಿಸಿ ಹೊಸ ಗೇಟುಗಳ ಅಳವಡಿಕೆಯನ್ನು ಮುಂಗಾರು ಪೂರ್ವದಲ್ಲಿ ಪೂರ್ಣಗೊಳಿಸಲಾಗುವುದು.

    * ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಡಿ ಅರಣ್ಯ ತೀರುವಳಿ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.

    * ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ಉಡುತೊರೆಹಳ್ಳ ಯೋಜನೆಯನ್ನು 490 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಿದೆ.

    * ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ
    259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ 119 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯನ್ನು 650 ಕೋಟಿ ರೂ.ಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು.
    • ರಾಜ್ಯದ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ.

      * ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು. ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ.

      * ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಿದೆ. ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

      * ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲಬುರಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. 

       * ಸರ್ಕಾರದ 11 ಪಾಲಿಟೆಕ್ನಿಕ್‌ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ AI, ಮಷಿನ್‌ ಲರ್ನಿಂಗ್‌, ಕ್ಲೌಡ್‌ ಕಂಪ್ಯೂಟಿಂಗ್‌, ಮೈನಿಂಗ್‌ ಇಂಜಿನಿಯರಿಂಗ್‌, ಆಟೋಮೇಷನ್‌ ಇಂಜಿನಿಯರಿಂಗ್‌ ಮುಂತಾದ 15 ಹೊಸ ಕೋರ್ಸ್‌ಗಳನ್ನು ಪ್ರಾರಂಭ.

      *ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್‌ಗಳನ್ನು ನೀಡಲಾಗುವುದು.

      ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್‌ ಸೇವೆಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಮೀಸಲು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

      * 236 ಕೋಟಿ ರೂ. ವೆಚ್ಚದ‌ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು. ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು. 

      ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.

      More articles

      Latest article

      Most read