ಅರಣ್ಯ ಮತ್ತು ಜೀವಿ ಪರಿಸರ ಶಾಸ್ತ್ರ
• ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗಿರುವ ಸಸ್ಯ ಪ್ರಭೇದಗಳನ್ನು ಬೆಳೆಸಲು “ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್” ನೀತಿ ಜಾರಿ.
• ವಿವಿಧ ಕಾರ್ಯಕ್ರಮದಡಿ ಅರಣ್ಯ ಪ್ರದೇಶದಲ್ಲಿ 28,494 ಹೆಕ್ಟೇರ್‌ನಲ್ಲಿ 213 ಲಕ್ಷ ಸಸಿಗಳನ್ನು ಹಾಗೂ ಅರಣ್ಯೇತರ ಪ್ರದೇಶದಲ್ಲಿ 1,200 ಹೆಕ್ಟೇರ್‌ನಲ್ಲಿ 3.50 ಲಕ್ಷ ಸಸಿಗಳನ್ನು ಬೆಳೆಸಿ ನೆಡುತೋಪುಗಳ ನಿರ್ವಹಣೆಗೆ ಕ್ರಮ.
• ಹವಮಾನ ಬದಲಾವಣೆಯ ಪರಿಣಾಮವನ್ನು ನಿಯಂತ್ರಿಸಲು “ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCMF)” ಸ್ಥಾಪನೆ.
• ವನ್ಯ ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಪ್ರಾಣ ಹಾನಿ ಪ್ರಕರಣದಲ್ಲಿ ನೀಡಲಾಗುತ್ತಿರುವ ದಯಾತ್ಮಕ ಧನ 20 ಲಕ್ಷ ರೂ.ಗಳಿಗೆ ಹೆಚ್ಚಳ.
• ಕೃಷಿ ಭೂಮಿಯಲ್ಲಿ ಸಾಗುವಾನಿ ಮತ್ತು ಇತರೆ ಬೆಲೆ ಬಾಳುವ ಮರಗಳನ್ನು ಬೆಳೆಸಲು ಉತ್ತೇಜನ ನೀಡಲು ಸಾಗಾಣಿಕೆ ನಿಯಮಾವಳಿಗಳ ಸರಳೀಕರಣ.
• ರಾಜ್ಯದಲ್ಲಿ ಕಾಡಾನೆ ಹಾಗೂ ಚಿರತೆ ಹಾವಳಿಯನ್ನು ನಿಯಂತ್ರಿಸಲು ರಚಿಸಿರುವ ಕಾರ್ಯಪಡೆಗಳ ಕಾರ್ಯನಿರ್ವಹಣೆಗೆ 17 ಕೋಟಿ ರೂ.
• ಮಾನವ-ಆನೆ ಸಂಘರ್ಷ ತಡೆಗಟ್ಟಲು ಎರಡು ವರ್ಷಗಳಲ್ಲಿ 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿ. 2025-26ನೇ ಸಾಲಿನಲ್ಲಿ 60 ಕೋಟಿ ರೂ. ಮೀಸಲು.
• ಬೆಂಗಳೂರು ನಗರದಲ್ಲಿರುವ 3,000 ಕೊಳಚೆ ನೀರು ಸಂಸ್ಕರಣಾ ಘಟಕಗಳಿಗೆ (STP) ರಿಯಲ್ ಟೈಮ್ ವಾಟರ್ ಕ್ವಾಲಿಟಿ ಮಾನಿಟರಿಂಗ್ ಸಿಸ್ಟಮ್ ಗಳನ್ನು (RTWQMS) ಹಂತ ಹಂತವಾಗಿ ಅಳವಡಿಸಲು ಕ್ರಮ.
• ಕೈಗಾರಿಕೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ವಯಂ ಪ್ರಮಾಣೀಕರಣ ಮತ್ತು ಮಂಡಳಿಯಲ್ಲಿ ಲಭ್ಯವಿರುವ ಅನುಪಾಲನಾ ದಾಖಲೆಗಳನ್ನು ಆಧರಿಸಿ ಸ್ವಯಂಚಾಲಿತ ಸಮ್ಮತಿ ನವೀಕರಣ ನೀಡಲು ಕ್ರಮ.
ಕಂದಾಯ
• ಇ-ಜಮಾಬಂದಿ ತಂತ್ರಾಂಶ ಅಭಿವೃದ್ಧಿಪಡಿಸಿ ಪ್ರಸ್ತುತ ಸಾಲಿನಿಂದ ಜಾರಿ.
• ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಇ-ಪೌತಿ ಆಂದೋಲನ.
• ಹೊಸ ಭೂ-ಕಂದಾಯ ಕಾಯ್ದೆ ಜಾರಿಗೆ ಕ್ರಮ.
• ಸುಸಜ್ಜಿತ 100 ನಾಡ ಕಛೇರಿಗಳನ್ನು ನಿರ್ಮಿಸಲು ನಿರ್ಧಾರ.
• ಪರಿಣಿತರ ಸಮಿತಿ ರಚಿಸಿ ಹೊಸ ಕರ್ನಾಟಕ ಭೂ ಕಂದಾಯ ಕಾಯ್ದೆ ಜಾರಿಗೊಳಿಸಲಾಗುವುದು.
• ಸುಸರ್ಜಿತ ೧೦೦ ನಾಡಕಛೇರಿಗಳನ್ನು ನಿರ್ಮಾಣ ಮಾಡಲಾಗುವುದು.
• ಹೊಸದಾಗಿ ರಚನೆಯಾದ ತಾಲ್ಲೂಕುಗಳ ಪೈಕಿ 21 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಕ್ರಮ.
• ಭೂಮಾಪನ ಇಲಾಖೆಯು ಕೈಗೊಳ್ಳುತ್ತಿರುವ ಸಾಂಪ್ರದಾಯಿಕ ಸರ್ವೆ ಕಾರ್ಯ ಡಿಜಿಟಲೀಕರಣ.
• ಆಯ್ದ ನಗರಸಭೆ / ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಕ್ಷಾ ಯೋಜನೆಯಡಿಯಲ್ಲಿ ಡ್ರೋಣ್ ಬಳಸಿ ಸರ್ವೆ ಮಾಡುವ ಮೂಲಕ ಆಸ್ತಿಗಳ ಡಿಜಿಟಲೀಕರಣ.
• ಸಕಾಲ ಕಾಯ್ದೆಯಡಿ ಸಾಮಾಜಿಕ ಭದ್ರತಾ ಪಿಂಚಣಿ ಮಂಜೂರಾತಿ ಕಾಲಮಿತಿ 21 ದಿನಗಳಿಗೆ ಕಡಿತ.
• ಒಟ್ಟು 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಜಲ ಭದ್ರತೆ ಮತ್ತು ವಿಪತ್ತು ತಡೆಯುವಿಕೆ ಕಾರ್ಯಕ್ರಮ ಜಾರಿ
i) ಬಿಬಿಎಂಪಿ ವ್ಯಾಪ್ತಿಯಲ್ಲಿ 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪ್ರವಾಹ ನಿರ್ವಹಣಾ ವ್ಯವಸ್ಥೆ.
ii) ಬಿಡಬ್ಲ್ಯೂಎಸ್ಎಸ್ಬಿ ವತಿಯಿಂದ 1,070 ಕೋಟಿ ರೂ. ವೆಚ್ಚದಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಹಾಗೂ ಒಳಚರಂಡಿ ಪಂಪಿಂಗ್ ವ್ಯವಸ್ಥೆ.
iii) ಸಾಂಸ್ಥಿಕ ಸುಧಾರಣೆ ಕ್ರಮಗಳಿಗೆ 1,680 ಕೋಟಿ ರೂ.
iv) 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ
41 ಕೆರೆ ತುಂಬಿಸುವ ಕಾಮಗಾರಿ ಅನುಷ್ಠಾನ.
• ರಾಜ್ಯ ವಿಪತ್ತು ಉಪಶಮನ ನಿಧಿ ಹಾಗೂ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿ ಅನುದಾನದಡಿ:
i) ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಭೂ ಕುಸಿತ ತಡೆ ಕಾರ್ಯಕ್ರಮ.
ii) ಬೆಂಗಳೂರು ನಗರದಲ್ಲಿ 239 ಕೋಟಿ ರೂ. ವೆಚ್ಚದಲ್ಲಿ ಮಳೆ ಚರಂಡಿ ಪುನರ್ ನಿರ್ಮಾಣ, ಕೆರೆಗಳ ಪುನಃಶ್ಚೇತನ.
iii) 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಹೊಂಡಗಳ ನಿರ್ಮಾಣ.
iv) ಸಮುದ್ರ ಕೊರೆತ ತಪ್ಪಿಸಲು 200 ಕೋಟಿ ರೂ. ಯೋಜನೆ
v) ನವಲಗುಂದ ತಾಲ್ಲೂಕಿನ ಬೆಣ್ಣೆಹಳ್ಳದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಪ್ರವಾಹ ನಿಯಂತ್ರಣ ಕಾಮಗಾರಿ ಅನುಷ್ಠಾನ.
vi) ಕೊಪ್ಪಳ ಜಿಲ್ಲೆಯ ಹಿರೇಹಳ್ಳದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿ
• ಕಾವೇರಿ-2 ತಂತ್ರಾಂಶದ ಸಹಭಾಗಿತ್ವದಲ್ಲಿಯೇ ನೂತನ ಇ-ಸ್ಟಾಂಪಿಂಗ್ ವ್ಯವಸ್ಥೆ ಜಾರಿ.
• ಕಾವೇರಿ-2 ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯಡಿಯಲ್ಲಿಯೇ ನಿರ್ವಹಿಸಲು ಕ್ರಮ.
• 76 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 36 ನೋಂದಣಿ ಕಛೇರಿಗಳ ಆಧುನೀಕರಣ.
• ಒತ್ತುವರಿಯಾಗಿರುವ 328 ದೇವಾಲಯಗಳ ಆಸ್ತಿಗಳನ್ನು ಸಂರಕ್ಷಿಸಲು
ʻಭೂ-ವರಾಹʼ ಯೋಜನೆಯಡಿ ಸ್ಥಿರಾಸ್ತಿಗಳ ದಾಖಲೀಕರಣ.
• ಅರ್ಚಕರ ವಾರ್ಷಿಕ ತಸ್ತೀಕ್ ಮೊತ್ತ 72 ಸಾವಿರ ರೂ.ಗಳಿಗೆ ಹೆಚ್ಚಳ.
• ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಿಬ್ಬಂದಿ ವೇತನ ಸರ್ಕಾರದ ವತಿಯಿಂದ ಪಾವತಿಸಲು ಕ್ರಮ.
• ʻಕರ್ನಾಟಕ ದೇವಾಲಯಗಳ ವಸತಿ ಕೋಶʼ ಸ್ಥಾಪನೆ.
• ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 34 ಕೋಟಿ ರೂ. ಅನುದಾನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
• ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯ ಕಲ್ಪಿಸಲು ಕ್ರಮ.
• ಬೆಂಗಳೂರಿನಲ್ಲಿರುವ ಚಲನಚಿತ್ರ ಅಕಾಡೆಮಿ ನಿವೇಶನದಲ್ಲಿ ಪಿಪಿಪಿ ಮಾದರಿಯಲ್ಲಿ ಚಿತ್ರಮಂದಿರ ಸಮುಚ್ಛಯ ಅಭಿವೃದ್ಧಿ.
• ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್ ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು ಚಲನಚಿತ್ರ ಭಂಡಾರ ಸ್ಥಾಪನೆ.
• ಪತ್ರಕರ್ತರ ಮಾಸಾಶನ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ.
• ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆ ಸೃಜಿಸಲು ಕ್ರಮ.
• ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ “ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ” ಯೋಜನೆ ಅನುಷ್ಠಾನ.
• ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ.
• ಎಲ್ಲಾ ವಿಧದ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.ಗೆ ಮಿತಿಗೊಳಿಸಲು ಕ್ರಮ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ
• ಕರ್ನಾಟಕ -ಜಿಐಎಸ್ ಪೋರ್ಟಲ್ ಉನ್ನತೀಕರಣಕ್ಕೆ ಕ್ರಮ
• ಎಐ ಮತ್ತು ಜಿಐಎಸ್ ತಂತ್ರಜ್ಞಾನ ಬಳಸಿಕೊಂಡು ಹಾಜರಾತಿ ನಿರ್ವಹಣಾ ವ್ಯವಸ್ಥೆ ಸುಧಾರಣೆ.
• ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಆದ್ಯತೆ.
• ಆಡಳಿತದಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಎಲ್ಲಾ ನಗದು ಮತ್ತು ನಗದು ರಹಿತ ಯೋಜನೆಗಳು ಡಿಬಿಟಿ ವ್ಯಾಪ್ತಿಗೆ.
• 10 ಸಾವಿರ ಕಛೇರಿಗಳಿಗೆ KSWAN ಯೋಜನೆ ವಿಸ್ತರಣೆ.
• AI ಆಧಾರಿತ ವ್ಯವಸ್ಥೆ ಅಭಿವೃದ್ಧಿಗೆ ಕ್ರಮ.
• ಸರ್ಕಾರದಿಂದ ತನ್ನದೇ ಆದ ಇ-ಆಫೀಸ್ ತಂತ್ರಾಂಶ ಅಭಿವೃದ್ಧಿ.
• ರಾಜ್ಯವನ್ನು ನಾಗರಿಕ ಕೇಂದ್ರಿತ ಡಿಜಿಟಲ್ ಅಡಳಿತದಲ್ಲಿ ಮುಂಚೂಣಿಗೆ ತರಲು ಕ್ರಮ.
ಒಳಾಡಳಿತ
• ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಲವು ಕ್ರಮಗಳ ಜಾರಿ.
i) ಬೆಂಗಳೂರು ಸೇಫ್ ಸಿಟಿ ಯೋಜನೆ 667 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
ii) ನಗರದಾದ್ಯಂತ ಒಟ್ಟು 60 ಮಹಿಳಾ ಔಟ್ ಪೋಸ್ಟ್ ಸ್ಥಾಪನೆ.
iii) 30 ಕೋಟಿ ರೂ. ವೆಚ್ಚದಲ್ಲಿ 12 ಪೋಲೀಸ್ ಠಾಣೆ ಸೇರಿ ಕಛೇರಿಗಳ ನಿರ್ಮಾಣ.
iv) ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ಕಾರ್ಯಕ್ಷಮತೆ ಹೆಚ್ಚಳ.
• ಪೊಲೀಸ್ ಮೊಬಿಲಿಟಿ ಯೋಜನೆಯಡಿ ಒಂದು ಸಾವಿರ ವಾಹನ ಖರೀದಿಗೆ 50 ಕೋಟಿ ರೂ.
• ನಕ್ಸಲ್ ನಿಗ್ರಹ ಪಡೆ ವಿಸರ್ಜನೆ, ನಕ್ಸಲ್ ಪುನರ್ವಸತಿಗೆ ೧೦ ಕೋಟಿ ರೂ. ಮೀಸಲು
• ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗ ಬಲಪಡಿಸಲು 5 ಕೋಟಿ ರೂ. ನೆರವು.
• ಎರಡು ಭಾರತೀಯ ಮೀಸಲು ಪೊಲೀಸ್ ಪಡೆ ಸ್ಥಾಪಿಸಲು 80 ಕೋಟಿ ರೂ. ಅನುದಾನ.
• ಪೊಲೀಸ್ ಗೃಹ-2025 ಯೋಜನೆಯಡಿ ವಸತಿ ಗೃಹಗಳ ನಿರ್ಮಾಣ ಕಾರ್ಯಕ್ಕೆ 300 ಕೋಟಿ ರೂ. ಅನುದಾನ
• ಬೆಂಗಳೂರು ನಗರದಲ್ಲಿ ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಹೆಚ್ಚಳ.
• 4 ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸ್ಥಾಪನೆ.
• ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ ತಪಾಸಣೆ ಮೊತ್ತ 1500 ರೂ. ಗೆ ಹೆಚ್ಚಳ.
• ಆಹಾರ ಭತ್ಯೆಯ ದರ 300 ರೂ. ಗೆ ಹೆಚ್ಚಳ
• ಗೃಹರಕ್ಷಕ ಮತ್ತು ಪೌರ ರಕ್ಷಣಾ ಸ್ವಯಂ ಸೇವಕರು ಕರ್ತವ್ಯದ ವೇಳೆ ಮರಣ ಹೊಂದಿದಲ್ಲಿ ನೀಡುವ ಪರಿಹಾರ ಧನ 10 ಲಕ್ಷ ರೂ.ಗಳಿಗೆ ಹೆಚ್ಚಳ.
• ಕಾರಾಗೃಹ ಇಲಾಖೆ ಮೂಲಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.
• ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಉಪಕರಣಗಳ ಖರೀದಿ ಮತ್ತು ಕಟ್ಟಡ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ. ಇಲಾಖೆಯ ಆಧುನೀಕರಣಕ್ಕೆ 330 ಕೋಟಿ ರೂ, ಮೈಸೂರು ವ್ಯಾಪ್ತಿಯಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ.