ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 8, ಶುಕ್ರವಾರದಂದು ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.
ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;080-22945119 ಮತ್ತು 080-22229639.
ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಿದೆ. ಈ ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.