ಬೆಂಗಳೂರು : ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಉಪಚುನಾವಣೆ ನಡೆಯಲಿದೆ. ಎರಡೂ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಮತದಾನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬಾಗಲಕೋಟೆಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆದಿದ್ದು, ಮತಗಟ್ಟೆಗಳಿಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಇವಿಎಂ ಯಂತ್ರಗಳನ್ನು ಪಡೆದು ತಮ್ಮ ಬೂತ್‌ಗಳತ್ತ ತೆರಳಿದ್ದಾರೆ.
ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಇದರಲ್ಲಿ 1,26,999 ಪುರುಷರು, 1,32,775 ಮಹಿಳೆಯರು ಮತ್ತು 23 ಇತರೆ ಮತದಾರರಿದ್ದಾರೆ. ಒಟ್ಟು 322 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1564 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು 2,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರಾ ಪೈಪೋಟಿ ನಡೆದಿದೆ.
ವರದಿ ಕೇಳಿದ ಚುನಾವಣೆ ಆಯೋಗ
ದಾವಣಗೆರೆ, ಬಾಗಲಕೋಟೆ ಜಿಲ್ಲೆಗಳಿಗೆ ಗ್ಯಾರಂಟಿ ಹಣ ಬಿಡುಗಡೆ ಮಾಡಿರೋದ್ರ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವರದಿ ಕೇಳಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಆಯೋಗದ ಪೂರ್ವಾನುಮತಿ ಇಲ್ಲದೆ ಕಲ್ಯಾಣ ಯೋಜನೆಗಳ ಮೇಲೆ ಯಾವುದೇ ಹೊಸ ಹಣವನ್ನು ಬಿಡುಗಡೆ ಮಾಡಬಾರದು. ಆದರೆ ಎರಡೂ ಜಿಲ್ಲೆಗಳಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಹಣ ಬಿಡುಗಡೆಗೆ ಮಂಜೂರು ಮಾಡಿದ ಸಂಬಂಧಪಟ್ಟ ಅಧಿಕಾರಿಯ ಹೆಸರಿನೊಂದಿಗೆ ವರದಿ ನೀಡಿ ಅಂತಾ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಪವಾನ್ ದಿವಾನ್ ಪತ್ರ ಬರೆದಿದ್ದಾರೆ.
ದಾವಣಗೆರೆ, ಬಾಗಲಕೋಟೆಗೆ ನಾಳೆ ಉಪ ಚುನಾವಣೆ ಸಮರ