ನ.13ಕ್ಕೆ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ: ಚುನಾವಣಾ ಆಯೋಗ ಘೋಷಣೆ

Most read

ರಾಜ್ಯದ 3 ಕ್ಷೇತ್ರಗಳ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ ನವೆಂಬರ್ 13ಕ್ಕೆ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ನ. 23 ರಂದು ಉಪಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಅಕ್ಟೋಬರ್ 18 ರಿಂದ ನಾಮಪತ್ರ ಸಲ್ಲಿಕೆ. ಅಕ್ಟೋಬರ್ 25 ನಾಮ ಪತ್ರ ಸಲ್ಲಿಕೆಗೆ ಕೊನೆ ದಿನ. ಅಕ್ಟೋಬರ್ 28 ರಂದು ನಾಮಪತ್ರ ಪರಿಶೀಲನೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ ಎಂದು ಘೋಷಣೆ ಮಾಡಿದೆ.

ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಬಳ್ಳಾರಿ ಕಾಂಗ್ರೆಸ್ ಸಂಸದ ಈ. ತುಕಾರಾಮ್ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಿಗಧಿಯಾಗಿದೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗುತ್ತಿದೆ.

ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನ.13 ರಂದು ಉಪಚುನಾವಣೆ ನಡೆಯಲಿದೆ. ಉತ್ತರಾಖಂಡದ ಒಂದು ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ನಾಂದೇಡ್‌ ಲೋಕಸಭಾ ಕ್ಷೇತ್ರ ಉಪಚುನಾವಣೆ ನ.20 ರಂದು ನಡೆಯಲಿದೆ.

More articles

Latest article