ಉಪಚುನಾವಣೆ; ವೇತನ ಸಹಿತ ರಜೆ ಮಂಜೂರು

Most read

ಬೆಂಗಳೂರು: ದಿನಾಂಕ 13.11.2024ರ ಬುಧವಾರದಂದು ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರೇ ಔಧ್ಯಮಿಕ ಸಂಸ್ಥೆಗಳಲ್ಲಿ (Business, trade, Industrial Undertaking or any other
establishment) ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಮತದಾರರಿಗೆ ಸೀಮಿತವಾದಂತ ಹಾಗೂ
ಎಲ್ಲಾ ಅರ್ಹ ಮತದಾನ ಮಾಡಲು ಅನುಕೂಲವಾಗುವಂತೆ Negotiable Instrument Act 1881, ಕಲಂ 25ರಡಿ ಮತ್ತು Representation of People Act,1951 ಕಲಂ 135 ಬಿ ಅಡಿಯಲ್ಲಿ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ.

More articles

Latest article