ಉಪ ಚುನಾವಣೆ ಸಿದ್ದತೆ ಕುರಿತು ಬಿಎಸ್ ವೈ ಜೊತೆ ಚರ್ಚೆ ನಡೆಸಿದ ಬೊಮ್ಮಾಯಿ; ಪುತ್ರನಿಗೆ ಟಿಕೆಟ್ ಬೇಡಿಕೆ ಇಟ್ಟ ಸಂಸದ

Most read

ಬೆಂಗಳೂರು: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಬಿಎಸ್ ವೈ ಅವರ ಧವಳಗಿರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು.


ಬಲ್ಲ ಮೂಲಗಳ ಪ್ರಕಾರ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಯಲು ತಮ್ಮ ಪುತ್ರ ಭರತ್ ಗೆ ಅವಕಾಶ ನೀಡಬೇಕೆಂದು ಕೋರಿದ್ದಾರೆ ಎಂದು ತಿಳಿದು ಬಂದಿದೆ.


ಬಿ.ಎಸ್. ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಶಿಗ್ಗಾಂವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ. ದೆಹಲಿಗೆ ಅಕ್ಟೋಬರ್ 19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುವುದಕ್ಕೆ‌ ಪ್ರಯತ್ನ ಮಾಡೋಣ ಎಂದು ಹೇಳಿದ್ದಾರೆ ಎಂದರು.


ಚನ್ನಪಟ್ಟಣ ಟಿಕಟ್ ಕುರಿತು ಕೇಳಿದ ಪ್ರಶ್ನೆಗೆ ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

More articles

Latest article